ಭಾರೀ ಗಾಳಿ ಮಳೆ ಹಿನ್ನೆಲೆ: ಮಲೆನಾಡು ಭಾಗದ 6 ತಾಲೂಕಿನ ಶಾಲೆಗಳಿಗೆ ರಜೆ
25/07/2024
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆಯಾಗುತ್ತಿದೆ. ಹೀಗಾಗಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜುಲೈ 25 ರಂದು ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ—ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಮಾತ್ರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: