ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು!
ಉಡುಪಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿ ಸನಿಹ ಇರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜು ಗಜಾನನ ನಾಯ್ಕ (52) ಎನ್ನುವರು ಆತ್ಮಹತ್ಯೆ ಮಾಡಿಕೊಡವರೆಂದು ತಿಳಿದುಬಂದಿದೆ. ಜೀವನದಲ್ಲಾದ ಜಿಗುಪ್ಸೆಯಿಂದ ವ್ಯಕ್ತಿ ಆತ್ಮಹತ್ಯೆ ಕೃತ್ಯ ಎಸಗಲು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳದಲ್ಲಿದ್ದು ಠಾಣಾಧಿಕಾರಿ ಸಕ್ತಿವೇಲು, ಪ್ರೊಬೇಷನರಿ ಎಸ್.ಐ. ಸುಷ್ಮಾ ಭಂಡಾರಿ, ರವಿ ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ನೆರವಾದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka