ಬದುಕಿರುವ ವಾಪಸ್ ಕರೆ ತರದೆ ಹೆಣಗಳನ್ನು ತರುತ್ತಿದ್ದಾರೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬದುಕಿರುವ ವಿದ್ಯಾರ್ಥಿಗಳನ್ನ ವಾಪಸ್ ಕರೆ ತರಲಿಲ್ಲ. ಅವರ ಹೆಣಗಳನ್ನು ಇಲ್ಲಿಗೆ ವಾಪಸ್ ತರ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಕೋಟಿ ಗಟ್ಟಲೆ ಶುಲ್ಕ ಕಟ್ಟಲು ಆಗಲ್ಲ. ಹಾಗಾಗಿ ಬೇರೆ ದೇಶಗಳಿಗೆ ಕಳುಹಿಸುತ್ತಾರೆ. ನಮ್ಮವರು ಬೇರೆ ದೇಶಗಳಿಗೆ ಹೋಗುತ್ತಿದ್ದಾರೆ. ಡಾಕ್ಟರ್ ಆಗಬೇಕೆಂಬ ಆಸೆಯಿಂದ ಹೋಗಿದ್ದ ನಮ್ಮ ವಿದ್ಯಾರ್ಥಿ ಪ್ರಾಣತ್ಯಾಗ ಮಾಡಿದ್ದಾನೆ. ಹೆಚ್ಚಿನ ಅಂಕ ಪಡೆದರೂ ಅಲ್ಲಿಗೆ ಹೋಗಬೇಕಾಯಿತು. ಇಲ್ಲಿ ಕಲಿಯೋಕೆ ಅವಕಾಶ ಸಿಗದೇ ಹೋಗಬೇಕಾಯಿತು. ಸಂಸದೀಯ ಸಚಿವರು ವಿದ್ಯಾರ್ಥಿಗಳನ್ನು ಅವಹೇಳನ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ ಅಲ್ಲಿಗೆ ಹೋದರು ಅಂತಾರೆ. ಪ್ರಧಾನಿಗಳು ಅದನ್ನೇ ಸಮರ್ಥಿಸಿಕೊಳ್ಳುತ್ತಾರೆ. ಇದು ವಿದ್ಯಾರ್ಥಿ ಸಮೂಹಕ್ಕೆ ಮಾಡಿದ ಅಪಮಾನ. ಕೂಡಲೇ ಸಚಿವರು ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳು ದಂಗೆ ಏಳುತ್ತಾರೆ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ: ಮೃತ ನವೀನ್ ತಂದೆ ಶೇಖರಗೌಡ
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಕಾಪಾಡಿದ ಬೌದ್ಧ ಧರ್ಮದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ: ಸಿಎಂಗೆ ಮನವಿ
ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಭೀಕರ ಹತ್ಯೆ