ಭಜರಂಗದಳದ ಕಾರ್ಯಕರ್ತನ ಬರ್ಬರ ಕೊಲೆ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ಶಾಲಾ-ಕಾಲೇಜುಗಳಿಗೆ ರಜೆ - Mahanayaka
7:32 AM Thursday 12 - December 2024

ಭಜರಂಗದಳದ ಕಾರ್ಯಕರ್ತನ ಬರ್ಬರ ಕೊಲೆ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ಶಾಲಾ-ಕಾಲೇಜುಗಳಿಗೆ ರಜೆ

harsha
21/02/2022

ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ(21) ಎಂಬಾತನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದನು.

ಘಟನೆ ಹಿನ್ನಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲೆಯಲ್ಲಿ ಬಿಗುವಿನ ವಾತಾವರಣವಿದೆ. ಸೀಗೆಹಟ್ಟಿ‌ ಭಾಗದಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್​ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿ‌ನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸೀಗೆಹಟ್ಟಿಯಲ್ಲಿ ಮನೆ ಮುಂದೆ ನಿಂತಿದ್ದ ಮೂರು ಬೈಕ್ ಹಾಗೂ ಒಂದು ಟಾಟಾ ಏಸ್​​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಕ್ಷಣ ಅಗ್ನಿಶಾಮಕದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ಶಾಲಾ-ಕಾಲೇಜುಗಳಿಗೆ ರಜೆ: ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಡಿಪಿಐ ರಮೇಶ್ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಮುಸ್ಲಿಂ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಸಚಿವ ಈಶ್ವರಪ್ಪ

ಆಮ್ಲೆಟ್​ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ

 

ಇತ್ತೀಚಿನ ಸುದ್ದಿ