ಬೆಚ್ಚಿ ಬೀಳಿಸಿದ ಘಟನೆ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ! - Mahanayaka
9:18 AM Wednesday 5 - February 2025

ಬೆಚ್ಚಿ ಬೀಳಿಸಿದ ಘಟನೆ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ!

chithradurga
24/07/2021

ಚಿತ್ರದುರ್ಗ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯೋರ್ವಳನ್ನು ಅತ್ಯಾಚಾರ ಎಸಗಿ  ಹತ್ಯೆ ಮಾಡಿರುವ ಅಮಾನವೀಯ ಘಟನೆಯೊಂದು ಚಿತ್ರದುರ್ಗ ತಾಲೂಕಿನ ಗ್ರಾಮವೊಂದರ ಹೊರ ವಲಯದಲ್ಲಿ ನಡೆದಿದ್ದು, ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಗೃಹ ನಿರ್ಮಾಣದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬ ಇಲ್ಲಿನ ಸಮುದಾಯ ಭವನದಲ್ಲಿ ವಾಸಿಸುತ್ತಿತ್ತು ಎಂದು ಹೇಳಲಾಗಿದೆ. ಬಹಿರ್ದೆಸೆಗೆಂದು ಬಾಲಕಿ ಗ್ರಾಮದ ಹೊರ ವಲಯದ ಪ್ರದೇಶಕ್ಕೆ ತೆರಳಿದ್ದಳು ಎಂದು ಹೇಳಲಾಗಿದ್ದು, ಆಕೆ ಹೋಗಿ ಬಹಳಷ್ಟು ಹೊತ್ತಾಗಿದ್ದರೂ ವಾಪಸ್ ಬಂದಿರಲಿಲ್ಲ. ಹೀಗಾಗಿ ಪೋಷಕರು ಆತಂಕಕ್ಕೊಳಗಾಗಿದ್ದಾರೆ.

ಬಾಲಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಪಕ್ಕದಲ್ಲಿರುವ ಮೆಕ್ಕೆಜೋಳದ ಜಮೀನಿನಲ್ಲಿ ಬಾಲಕಿಯ ಮೃತದೇಹ ವಿವಸ್ತ್ರವಾಗಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ವೇಳೆ ಬಾಲಕಿಯ ತಂದೆ ಹಾಗೂ ತಾಯಿ ಆಸ್ಪತ್ರೆಗೆ ಹೋಗಿದ್ದರು ಎಂದು ಹೇಳಲಾಗಿದೆ. ಅವರು ಆಸ್ಪತ್ರೆಯಿಂದ ಹೊರ ಬರುವಷ್ಟರಲ್ಲಿ ಈ ಘಟನೆ ನಡೆದು ಹೋಗಿದೆ. ಇನ್ನೂ ಬಾಲಕಿ ಮೃತದೇಹದ ಮೇಲೆ ಪರಚಿದ ಗಾಯಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಘಟನೆ ಸಂಬಂಧ ಭರಮಸಾಗರ ಠಾಣೆ ಪೊಲೀಸರು ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು,  ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

 ಇನ್ನಷ್ಟು ಸುದ್ದಿಗಳು…

 

ನನ್ನ ಗಂಡ ಅಮಾಯಕ, ಅವರು ಮಾಡಿದ್ದು ಸೆಕ್ಸ್ ವಿಡಿಯೋ ಅಲ್ಲ ಕಾಮ ಪ್ರಚೋದಕ ವಿಡಿಯೋ | ಶಿಲ್ಪಾ ಶೆಟ್ಟಿ

121 ಅಶ್ಲೀಲ ವಿಡಿಯೋಗಳನ್ನು 12 ಲಕ್ಷ ರೂ. ಮಾರಾಟ ಮಾಡಲು ಮುಂದಾಗಿದ್ದ ರಾಜ್ ಕುಂದ್ರಾ!

ಸಚಿವೆ ಶಶಿಕಲಾ ಜೊಲ್ಲೆ ಮನೆಗೆ ಮೊಟ್ಟೆ ಎಸೆದ NSUI ಕಾರ್ಯಕರ್ತರು

ರೆಡ್ ಅಲಾರ್ಟ್: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

ಭಾರೀ ಮಳೆಗೆ 138 ಮಂದಿ ಸಾವು, 89 ಮಂದಿಗೆ ಗಂಭೀರ ಗಾಯ ನಾಪತ್ತೆಯಾದವರೆಷ್ಟು ಗೊತ್ತಾ?

ಇತ್ತೀಚಿನ ಸುದ್ದಿ