ಬೈಕ್‌ ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರ ದಾರುಣ ಸಾವು - Mahanayaka

ಬೈಕ್‌ ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರ ದಾರುಣ ಸಾವು

accident
24/03/2022

ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ನಾಗರಾಜ (46), ಶೈಲಜಾ (43), ಸಂತೋಷ (16), ವಿರೇಶ (13) ವರ್ಷ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬರಮಣ್ಣನಕಾಯಕ ದುರ್ಗಾ ನಿವಾಸಿಗಳಾಗಿದ್ದು, ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ವಾಪಸ್ ಬರುವಾಗ ಹೊಳಲ್ಕೆರೆ ತಾಲುಕಿನ ದುಮ್ಮಿ ಬಳಿ ಬುಧವಾರ ರಾತ್ರಿ 10 ಗಂಟೆ ಸುಮರಿಗೆ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ತಂದೆ-ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹೊಳಲ್ಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು
ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಆರೋಪಿಯನ್ನು ಬಂಧಿಸಲು ತೆರಳಿದ್ದ ಎಸ್‍ಐಗೆ ಚೂರಿ ಇರಿತ

ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದೂ ಸಂಘಟನೆಗಳಿಂದ ಮನವಿ

ಕೊಂಡ ಹಾಯುವಾಗ ಕೆಂಡಕ್ಕೆ ಜಾರಿ ಬಿದ್ದು ಪೂಜಾರಿ ಗಂಭೀರ

ಇತ್ತೀಚಿನ ಸುದ್ದಿ