ಬೈಕ್ ಗಳ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಮೃತ್ಯು
ಮಂಡ್ಯ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 209ರ ದಾಸನದೊಡ್ಡಿ ಗ್ರಾಮದ ಬಳಿಯಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ 45 ವರ್ಷದ ವ್ಯಕ್ತಿ ಹೊಂಬಾಳೇಗೌಡ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ದಾಸನದೊಡ್ಡಿ ಗ್ರಾಮದಿಂದ ಕೊಳ್ಳೇಗಾಲದ ಕಡೆಗೆ ತಮ್ಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೊಂಬಾಳೆಗೌಡ ಅವರನ್ನು ತಕ್ಷಣವೇ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಮತ್ತೊಂದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಎಚ್. ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ಡಿ.ಪಿ.ಧನರಾಜ್, ಪಿಎಸ್ಸೈ ಕೆ.ಎಂ.ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.