ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ಮಂಜೂರು
13/12/2024
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರಾಗಿದೆ.
ದರ್ಶನ್ ಪರ ವಾದ ಮಂಡಿಸಿದ ಸಿ.ವಿ.ನಾಗೇಶ್, ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಅವರ ಪಾತ್ರವಿಲ್ಲ ಎಂದು ವಾದಿಸಿದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನ ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದರು.
ದರ್ಶನ್ ಪರ ವಕೀಲರ ವಾದ ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ, ದರ್ಶನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಇದರ ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನು ಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ದೊರೆತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: