ಮಹಾನಾಯಕ ಫಲಶ್ರುತಿ: ಬಜಾಲ್ ವಾರ್ಡಿನ ಕಟ್ಟಪುಣಿ–ಬಜಾಲ್ ತೋಟ ನಾಗರಿಕರ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ

ಮಂಗಳೂರು: ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಕಟ್ಟಪುಣಿ ಹಾಗೂ ಬಜಾಲ್ ತೋಟ ಎಂಬ ಪ್ರದೇಶಗಳಲ್ಲಿ ಕಳೆದ ಹಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಪ್ರಬಲವಾಗಿ ತಲೆದೋರಿತ್ತು.
ಇದರಿಂದಾಗಿ ಆ ಭಾಗದ ಜನರಿಗೆ ಕುಡಿಯಲು ನೀರು ಸಹಿತ ತಮ್ಮ ದಿನನಿತ್ಯದ ಚಟುವಟಿಕೆಗಳ ಬಳಕೆಗೆ ನೀರಿಲ್ಲದೆ ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ, ಸಂತ್ರಸ್ತ ನಾಗರಿಕರೊಂದಿಗೆ ಮಹಾನಗರ ಪಾಲಿಕೆಗೆ ತೆರಳಿ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಯಿತು. ಆದರೂ ಸ್ಪಂದನೆ ದೊರೆಯದಿದ್ದಾಗ ಪ್ರತಿಭಟನೆ ನಡೆಸಿ, ಖಾಲಿ ಕೊಡ ಪ್ರದರ್ಶನ ಮಾಡಿ ಅಧಿಕಾರಿಗಳ ಗಮನ ಸೆಳೆದಿದ್ದು, ವಾರದೊಳಗೆ ನೀರಿನ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿತ್ತು. ಈ ಬಗ್ಗೆ ‘ಮಹಾನಾಯಕ’ ಸವಿವರವಾದ ವರದಿಯನ್ನು ಪ್ರಕಟಿಸಿತ್ತು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ ಅಧಿಕಾರಿಗಳು ಈ ಸಮಸ್ಯೆಯ ಮೂಲವನ್ನು ಬೆನ್ನತ್ತಿ ಪರಿಹಾರವನ್ನು ಕಂಡು ಹಿಡಿದು ಈಗ ನೀರು ಸರಾಗವಾಗಿ ಸರಬರಾಜು ಆಗುತ್ತಿದೆ. ಇದರಿಂದಾಗಿ ಇಲ್ಲಿನ ನಾಗರಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಜೊತೆಗೆ ಈ ಸಮಸ್ಯೆಯ ಬೆನ್ನು ಹತ್ತಿ ಅಧಿಕಾರಿಗಳ ಗಮನ ಸೆಳೆದ ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿಗೆ ಅಭಿನಂದನೆ ಸಲ್ಲಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: