ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಬಜರಂಗದಳದ ಕಾರ್ಯಕರ್ತರಿಂದ ತಲ್ವಾರ್ ನಿಂದ ದಾಳಿ! - Mahanayaka
4:50 PM Wednesday 11 - December 2024

ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಬಜರಂಗದಳದ ಕಾರ್ಯಕರ್ತರಿಂದ ತಲ್ವಾರ್ ನಿಂದ ದಾಳಿ!

bantwala
27/10/2021

ಬಂಟ್ವಾಳ:  ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರೆನ್ನಲಾಗಿರುವ ತಂಡವೊಂದು ತಲ್ವಾರ್ ನಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರು ನಿವಾಸಿ, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಅವರ ಮೇಲೆ  ಬಜರಂಗದಳದ ಕಾರ್ಯಕರ್ತರು ಎನ್ನಲಾಗಿರುವ ತಂಡವೊಂದು ದಾಳಿ ನಡೆಸಿದೆ ಎನ್ನುವ ಆರೋಪ ಕೇಳಿ ಬಂದಿದೆ.

ನಿತಿನ್ ಬಡಗಬೆಳ್ಳೂರು, ನಿಶಾಂತ್ ಬೆಗಬೆಳ್ಳೂರು, ಪವನ್ ಕುಮ್ಡೇಲ್ ಮತ್ತಿತರರು ತಲ್ವಾರ್ ದಾಳಿ ನಡೆಸಿದವರಾಗಿದ್ದಾರೆ ಎಂದು ಹೇಳಲಾಗಿದೆ. ದಾಳಿ ವೇಳೆ ತಡೆಯಲು ಬಂದ ಪ್ರಕಾಶ್ ಅವರ ತಾಯಿ ಹಾಗೂ ಅಣ್ಣನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಪ್ರಕಾಶ್ ಅವರನ್ನು ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇತ್ತೀಚಿನ ಸುದ್ದಿ