ಬಜರಂಗದಳದಿಂದ ತ್ರಿಶೂಲ ದೀಕ್ಷೆ: ಪರಿಶೀಲನೆ ನಡೆಸಲು ಪೊಲೀಸ್ ಆಯುಕ್ತರಿಂದ ಸೂಚನೆ - Mahanayaka
9:08 AM Wednesday 11 - December 2024

ಬಜರಂಗದಳದಿಂದ ತ್ರಿಶೂಲ ದೀಕ್ಷೆ: ಪರಿಶೀಲನೆ ನಡೆಸಲು ಪೊಲೀಸ್ ಆಯುಕ್ತರಿಂದ ಸೂಚನೆ

trishul deeksha
15/10/2021

ಮಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಬಗ್ಗೆ ಪರಿಶೀಲನೆ ನಡೆಸಲು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (N.Shashi Kumar) ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಂಗಳೂರು ಸೇರಿದಂತೆ ಇತರ ಕಡೆಗಳಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ನಡೆದ ಆಯುಧ ಪೂಜೆಯ ಸಂದರ್ಭದಲ್ಲಿ  ತ್ರಿಶೂಲ ದೀಕ್ಷೆ (Trishul Deeksha) ಮಾಡಿರುವುದು ಗೊತ್ತಾಗಿದೆ. ಇದು ಪ್ರತೀ ವರ್ಷವೂ ಆಚರಿಸಲಾಗುತ್ತಿದೆ ಎಂದ ತಿಳಿದು ಬಂದಿದೆ. ಕಾನೂನಾತ್ಮಕವಾಗಿ ಇದರಲ್ಲಿ ತಪ್ಪಿದೆಯೇ ಎನ್ನುವುದನ್ನು ಪರಿಶೀರಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದರು.

ಮಂಗಳೂರು, ಉಡುಪಿ, ಪುತ್ತೂರು ಸೇರಿದಂತೆ ವಿವಿಧೆಡೆಗಳಲ್ಲಿ ಆಯುಧ ಪೂಜೆಯ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರು ಉತ್ತರ ಭಾರತದ ಶೈಲಿಯಲ್ಲಿ ತ್ರಿಶೂಲಕ್ಕೆ ಪೂಜೆ ಸಲ್ಲಿಸಿ ತ್ರಿಶೂಲ ಕೈಯಲ್ಲಿ ಹಿಡಿದಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗಳು ಹುಟ್ಟಿಕೊಂಡಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ: ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ

ಹೆರಿಗೆಯಾಗಿದ್ದು ಹೆಣ್ಣು, ಆದರೆ ಆಸ್ಪತ್ರೆಯವರು ನೀಡಿದ್ದು ಗಂಡು ಮಗುವನ್ನು!

ದೇವಸ್ಥಾನದ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ಗುಂಡು ಹಾರಿಸಿ ಕೊಂದ ಯುವಕರು !

ಗ್ರಾಮಾಂತರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಟ ವಿಜಯ್ ಅಭಿಮಾನಿಗಳ ಸಂಘ

ಕೋಟಿಗೊಬ್ಬ-3 ಬಿಡುಗಡೆಗೆ ಯಾರಿಂದ ತೊಂದರೆ ಆಯ್ತು ಅಂತ ಗೊತ್ತಿದೆ | ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್

ಸಂಘ ಪರಿವಾರದ ಓಲೈಕೆಗೆ ಸಿಎಂ ಬೊಮ್ಮಾಯಿ ಈ ಮಟ್ಟಕ್ಕೆ ಇಳಿಯಬಾರದಿತ್ತು | ಸಿದ್ದರಾಮಯ್ಯ ಆಕ್ರೋಶ

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

ಇತ್ತೀಚಿನ ಸುದ್ದಿ