ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ - Mahanayaka

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ

arrest
21/02/2022

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯನ್ನು ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದೆ. ಅವರಲ್ಲಿ ಓರ್ವ ಆರೋಪಿಯನ್ನು ದೊಡ್ಡಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದವನಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಘಟನೆ ವಿವರ: ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹರ್ಷನ ಮೇಲೆ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.


Provided by

ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಈ ವೇಳೆ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಪರಿಸ್ಥಿತಿ ನಿಯಂತ್ರಿಸಲು ಗುಂಪುಗೂಡಿದ್ದ ಯುವಕರನ್ನು ಪೊಲೀಸರು ಮನೆಯತ್ತ ವಾಪಸ್ ಕಳುಹಿಸಿದ್ದಾರೆ ಮತ್ತು ಮುಂಜಾಗ್ರತಾ ಕ್ರಮವಾಗಿ ತಕ್ಷಣದಿಂದಲೇ ಶಿವಮೊಗ್ಗ ಜಿಲ್ಲಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಸ್ಲಿಂ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಸಚಿವ ಈಶ್ವರಪ್ಪ

ವಡಾಪಾವ್ ತಿಂದು ಬಿಲ್ ಪಾವತಿಸದೇ ತೆರಳಿದ್ದ ಕೇಂದ್ರ ಸಚಿವರಿಗೆ ತೀವ್ರ ಮುಜುಗರ!

ಆಮ್ಲೆಟ್​ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ

ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ನಂದಿಬೆಟ್ಟದಿಂದ ಬೆಟ್ಟದಿಂದ ಜಾರಿ ಬಿದ್ದ ಯುವಕ: ಅಗ್ನಿ ಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ

 

ಇತ್ತೀಚಿನ ಸುದ್ದಿ