ಬಜೆಟ್ ನಲ್ಲಿ ವಿಶ್ವಕರ್ಮ ಸಮಾಜದ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಆಕ್ರೋಶ
ಹುಬ್ಬಳ್ಳಿ: ಬಜೆಟ್ ನಲ್ಲಿ ವಿಶ್ವಕರ್ಮ ಸಮಾಜವನ್ನು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿಶ್ವಕರ್ಮ ಛಾತ್ರಾ ಯುವ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಸಂಘದ ರಾಷ್ಟ್ರೀಯ ಅಧ್ಯಕ್ಷ ಸಂತೋಷ ಬಡಿಗೇರ ಮಾತನಾಡಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಟ್ಟಿಲ್ಲ. ಒಂದೇ ಒಂದೂ ಪೈಸೆ ನಿಗಮಕ್ಕೆ ನೀಡಿಲ್ಲ.ಇದನ್ನು ಸಮಾಜದ ಪರವಾಗಿ ಖಂಡಿಸುತ್ತೇವೆ. ಸಿಎಂ ಪೂರಕ ಬಜೆಟ್ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. ಪೂರಕ ಬಜೆಟ್‌ನಲ್ಲಾದರೂ ನಮ್ಮ ನಿಗಮಕ್ಕೆ ಅನುದಾನ ನೀಡಬೇಕು. ಇಲ್ಲದೇ ಹೋದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಗಮನಕ್ಕೂ ತರುತ್ತೇವೆ. ಎಲ್ಲಾ ಜಿಲ್ಲೆಗಳಲ್ಲಿ ಆಯಾ ಉಸ್ತುವಾರಿ ಸಚಿವರ ಮೂಲಕವೂ ಒತ್ತಡ ಹಾಕುತ್ತೇವೆ. ಒಂದು ವೇಳೆ ಹಣ ನೀಡದೇ ಹೋದಲ್ಲಿ ವಿನೂತನ ಹೋರಾಟ. ಕುಲಕಸುಬನ್ನೇ ಆಯಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಡುತ್ತೇವೆ. ಸರ್ಕಾರ ನಮ್ಮ ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದು ಸರಿಯಲ್ಲ ಎಂದು ಎಚ್ಚರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
500 ರೂ. ಕೀ ಪ್ಯಾಡ್ ಫೋನ್ ಗಾಗಿ ವ್ಯಕ್ತಿಯ ಕೊಲೆ
ರಷ್ಯಾಕ್ಕೆ ಮತ್ತೊಂದು ನಷ್ಟ: ಮೇಜರ್ ಜನರಲ್ ವಿಟಾಲಿ ಗೆರಾಸಿವೊವ್ ಸಾವು
ರಷ್ಯಾ ಸೇನೆಯಿಂದ ಉಕ್ರೇನ್‍ನ 202 ಶಾಲೆ, 34 ಆಸ್ಪತ್ರೆ ಧ್ವಂಸ
ಸಂಬಂಧಿಕರ ಮನೆಗೆ ಬಂದಿದ್ದ ಯುವಕ ನೇಣಿಗೆ ಶರಣು
ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ