ಬಾಕಿ ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈಯನ್ನೇ ಕತ್ತರಿಸಿದ ಪಾಪಿಗಳು!
ರೇವಾ: ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಕಾರ್ಮಿಕನೋರ್ವನ ಕೈಯನ್ನೇ ಕತ್ತರಿಸಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಡೊಲ್ಮಾವು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಅಶೋಕ್ ಸಾಕೇತ್ ಸಂತ್ರಸ್ತ ಕೂಲಿ ಕಾರ್ಮಿಕರಾಗಿದ್ದು, ಕೂಲಿಯನ್ನು ಕೇಳಿದ್ದಕ್ಕೆ ಮಾಲಿಕ ಡೊಲ್ಮಾವು ಗ್ರಾಮದ ಗಣೇಶ್ ಮಿಶ್ರಾ ತನ್ನ ಸಹಚರರ ಸಹಾಯದಿಂದ ಸಾಕೇತ್ ಅವರ ಕೈಯನ್ನೇ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದು ಸ್ವಲ್ಪ ಸಮಯದಲ್ಲಿಯೇ ಸಾಕೇತ್ ಅವರನ್ನು ಪೊಲೀಸರು ಸಂಜಯ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಿದ್ದು, ಇಲ್ಲಿ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ನಡೆಸಿ ಕೈಯನ್ನು ಮರು ಜೋಡಿಸಿದ್ದಾರೆ. ಆದರೆ, ತೀವ್ರವಾಗಿ ರಕ್ತಸ್ರಾವವಾದ ಕಾರಣ ಕಾರ್ಮಿಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಶಿವಕುಮಾರ್ ವರ್ಮಾ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗ್ರಾಹಕನನ್ನು ತಡೆದು, ‘ಪ್ಯಾಂಟ್ ಧರಿಸಿ ಬನ್ನಿ’ ಎಂದು ವಾಪಾಸ್ ಕಳುಹಿಸಿದ ಬ್ಯಾಂಕ್ ಸಿಬ್ಬಂದಿ!
ಆಡು ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಅಧಿಕಾರಿಯನ್ನು ಕೊಚ್ಚಿ ಹಾಕಿದ ಕಳ್ಳರ ಗ್ಯಾಂಗ್
ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನ ಮುಖಕ್ಕೆ ಆ್ಯಸಿಡ್ ಎರಚಿದ ಮಹಿಳೆ
ಕೋಲಾರ ಎಪಿಎಂಸಿಯಲ್ಲಿ 1 ಕೆ.ಜಿ.ಗೆ 125 ರೂ.ಗೆ ಮಾರಾಟವಾದ ಟೊಮೆಟೋ
ಹಿಂದೂ ಯುವತಿ, ಮುಸ್ಲಿಮ್ ಯುವಕನ ವಿವಾಹ ಫಿಕ್ಸ್: ಸ್ವಾಮೀಜಿಯಿಂದ ಸಂಧಾನಕ್ಕೆ ಯತ್ನ
ಆಂಧ್ರಪ್ರದೇಶ: ಪ್ರವಾಹದ ಪರಿಣಾಮ 25 ಮಂದಿ ಸಾವು, 17ಕ್ಕೂ ಅಧಿಕ ಮಂದಿ ನಾಪತ್ತೆ 20 ಸಾವಿರಕ್ಕೂ ಅಧಿಕ ಮಂದಿಯ ಸ್ಥಳಾಂತರ