16 ವರ್ಷದ ಬಾಲಕನ ಮೇಲೆ 69 ವರ್ಷದ ವೃದ್ಧೆಯಿಂದ ಲೈಂಗಿಕ ದೌರ್ಜನ್ಯ!
11/04/2021
ಕೊಲ್ಲಂ: 16 ವರ್ಷ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 69 ವರ್ಷ ವಯಸ್ಸಿನ ಮಹಿಳೆಯನ್ನು ಕುಲತುಪುಳ ಪೊಲೀಸರು ಬಂಧಿಸಿದ್ದಾರೆ.
ಸೆಪ್ಟಂಬರ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ತ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವೈದ್ಯಕೀಯ ವರದಿಯ ಬಳಿಕ ಈ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಬೇಕಿದೆ.