ಬಾಲಕನಿಗೆ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ ಕಾಂಗ್ರೆಸ್ ಮುಖಂಡನ ಕಾರು ಚಾಲಕ!
ಕೊಚ್ಚಿ: ವಿಧಾನಸಭಾ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ತೆರಳಿದ್ದ 16 ವರ್ಷದ ಬಾಲಕನ ಮೇಲೆ ಕಾಂಗ್ರೆಸ್ ಮುಖಂಡರೋರ್ವರ ಕಾರು ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. . ಎರ್ನಾಕುಲಂ ನಗರದಲ್ಲಿ ನಡೆದ ಕಾರ್ಯಕ್ರಮದ ಬಳಿಕ ನಗರದ ಬಾರ್ ನಲ್ಲಿ ಬಾಲಕನಿಗೆ ಮದ್ಯ ಕುಡಿಸಲಾಗಿದೆ. ಬಳಿಕ ಸಮೀಪದ ಲಾಡ್ಜ್ ಗೆ ಕರೆದೊಯ್ದು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.
ಮರು ದಿನ ಬೆಳಗ್ಗೆ ಬಾಲಕ ಲಾಡ್ಜ್ ನ ಕೋಣೆಯಲ್ಲಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಾಲಕನ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಬಾಲಕನ ತಾಯಿ ಮುಲಾವುಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಚ್ಚಿಯ ಪ್ರಮುಖ ಕಾಂಗ್ರೆಸ್ ಮುಖಂಡರ ಕಾರು ಚಾಲಕ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಬಾಲಕನ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಲಾಡ್ಜ್ ನಿಂದ ಪ್ರಾಥಮಿಕ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸಿದ್ದಾರೆ. ಈ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಆರೋಪಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.