4 ವರ್ಷದ ಬಾಲಕಿ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ! - Mahanayaka
1:06 AM Wednesday 11 - December 2024

4 ವರ್ಷದ ಬಾಲಕಿ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ!

stop rape
01/02/2022

ಚೆನ್ನೈ: ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 14 ವರ್ಷದ ಬಾಲಕನನ್ನು ಬಂಧಿಸಿರುವ ಘಟನೆ ತಮಿಳುನಾಡು ಟುಟಿಕೋರಿನ್‌ ಜಿಲ್ಲೆಯಲ್ಲಿ ನಡೆದಿದೆ.

ಬಾಲಕ ಟ್ಯುಟಿಕೋರಿನ್‌ನ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ನೆರೆಮನೆ ಬಾಲಕಿ ಮೇಲೆ ದೌರ್ಜನ್ಯವೆಸಗಿದ್ದಾನೆ. ತಂದೆಯಿಲ್ಲದ ಬಾಲಕ ತನ್ನ ತಾಯಿಯೊಂದಿಗೆ ವಾಸವಾಗಿದ್ದು, ಶನಿವಾರ ಬಾಲಕಿ ಹಾಗೂ ಆಕೆಯ ಸಹೋದರ ಆರೋಪಿ ಬಾಲಕನ ಮನೆ ಮುಂದೆ ಆಟವಾಡುತ್ತಿದ್ದರು. ಈ ವೇಳೆ ಆಕೆಯೊಂದಿಗೆ ಆಟವಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು ತನ್ನ ಮನೆ ಬಳಿಯ ಏಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ತಾಯಿ ಸ್ನಾನ ಮಾಡಿಸುವ ವೇಳೆ ಬಾಲಕಿ ನೋವಿನಿಂದ ಅಳುತ್ತಿದ್ದು ಈ ವೇಳೆ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಆಕೆಯನ್ನು ವಿಲತ್ತಿಕುಲಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ವೈದ್ಯರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವಾಗಿರುವುದನ್ನು ದೃಢಪಡಿಸಿದ್ದಾರೆ.

ತಾಯಿ ನೀಡಿರುವ ದೂರಿನ ಆಧಾರದ ಮೇಲೆ ವಿಲತ್ತಿಕುಲಂ ಮಹಿಳಾ ಪೊಲೀಸರು ವಿರುದ್ಧ ಸೂಕ್ತ ಐಪಿಸಿ ಸೆಕ್ಷನ್‌ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಂದಿನ 25 ವರ್ಷಗಳ ದೂರದೃಷ್ಟಿಯ ಬಜೆಟ್‌: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ಕೇಂದ್ರ ಬಜೆಟ್ ಮೇಲೆ ನಂಬಿಕೆಯಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಯೂಟ್ಯೂಬ್‌ ನಲ್ಲಿ ಯುವತಿಯ ಫೋಟೋ ದುರ್ಬಳಕೆ: ಸಾಫ್ಟ್‌ವೇರ್‌ ದಂಪತಿ ಬಂಧನ

ಮಹಿಳೆಯರ ಮೇಲೆ ಚಿರತೆ ದಾಳಿ

ಇತ್ತೀಚಿನ ಸುದ್ದಿ