ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ: ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಪರಾರಿ!
ಬೆಳ್ತಂಗಡಿ; ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಪರಿಚಿತ ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಇದೀಗ ಗರ್ಭಿಣಿಯಾಗಿರುವ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಯುವಕ ಪರಾರಿಯಾಗಿದ್ದಾನೆ.
ಹೊಸಂಗಡಿಯಲ್ಲಿ ಘಟನೆ ನಡೆದಿದ್ದು, ಎರಡು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕ ಬಳಿಕ ತನ್ನ ಬಳಿ ವೀಡಿಯೋ ಇರುವುದಾಗಿ ಹೇಳಿ ಬಾಲಕಿಗೆ ಬೆದರಿಕೆ ಹಾಕಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಾಲಕಿಯ ದೂರಿನಂತೆ ಸ್ಥಳೀಯ ನಿವಾಸಿ ಅರವಿಂದ(24) ಎಂಬಾತನ ವಿರುದ್ದ ವೇಣೂರು ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka