ರಸ್ತೆದಾಡುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಬಿಬಿಎಂಪಿ ಕಸದ ಲಾರಿ: ಶಾಲಾ ಬಾಲಕಿ ಸಾವು - Mahanayaka
10:31 PM Thursday 19 - September 2024

ರಸ್ತೆದಾಡುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಬಿಬಿಎಂಪಿ ಕಸದ ಲಾರಿ: ಶಾಲಾ ಬಾಲಕಿ ಸಾವು

akshaya
21/03/2022

ಬೆಂಗಳೂರು: ರಸ್ತೆ ದಾಟುತ್ತಿದ್ದ ಮೂವರಿಗೆ ಬಿಬಿಎಂಪಿ ಕಸದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಓರ್ವಳು ಶಾಲಾ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಲ್ಲಿನ ಸದಾಶಿವನಗರ ಶಾಲೆಯಲ್ಲಿ ಓದುತ್ತಿದ್ದ 13 ವರ್ಷ ವಯಸ್ಸಿನ ಬಾಲಕಿ ಅಕ್ಷಯಾ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದ್ದು, ಶಾಲೆ ಮುಗಿಸಿದ ಬಳಿ ಮನೆಯ ಕಡೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹೆಬ್ಬಾಳ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತೆ ಕೆಳ ಸೇತುವೆ ಇದೆ. ಇದರ ಮೂಲಕ ಪಾದಚಾರಿಗಳು ಯಾವಾಗಲೂ ರಸ್ತೆ ದಾಟುತ್ತಿದ್ದರು. ಆದರೆ, ಭಾನುವಾರ ರಾತ್ರಿ ಮಳೆ ಸುರಿದ ಪರಿಣಾಮ ಜನರೆಲ್ಲರೂ ಮುಖ್ಯ ರಸ್ತೆಯಲ್ಲಿಯೇ ದಾಟಿಕೊಂಡು ಹೋಗುವಂತಾಗಿತ್ತು. ರಸ್ತೆದಾಡುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬಾಲಕಿ ಸೇರಿದಂತೆ ಮೂವರಿಗೆ ಡಿಕ್ಕಿ ಹೊಡೆದಿದೆ. ಬೈಕ್ ವೊಂದಕ್ಕೆ ಕೂಡ ಇದೇ ವೇಳೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


Provided by

ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಅಮಾಯಕರ ಪ್ರಾಣ  ಬಲಿ

ಕೆಳಸೇತುವೆಯಲ್ಲಿ ನೀರು ನಿಂತಿದೆ. ನೀರನ್ನು ತೆರವುಗೊಳಿಸಿ ಎಂದು ಸ್ಥಳೀಯರು ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದರು. ಆದರೆ ಬಿಬಿಎಂಪಿ ಸಿಬ್ಬಂದಿ ನೀರು ತೆರವುಗೊಳಿಸದೇ ನಿರ್ಲಕ್ಷಿಸಿದ್ದು, ಇದರಿಂದಾಗಿ ಸಾರ್ವಜನಿಕರು  ರಸ್ತೆಯಲ್ಲಿ ನಡೆದುಕೊಂಡು ಹೋಗುವಂತಾಗಿತ್ತು. ಬಿಬಿಎಂಪಿ ಸಾರ್ವಜನಿಕರ ಮನವಿಗೆ ಸ್ಪಂದಿಸಿದ್ದರೆ, ಬಾಲಕಿಯ ಪ್ರಾಣ ಉಳಿಯುತ್ತಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

133 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನ ಪತನ

ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಭೀಕರ ಅಪಘಾತ ಖ್ಯಾತ ನಟಿ ಡಾಲಿ ಡಿಕ್ರೂಜ್ ಸೇರಿದಂತೆ ಮೂವರ ದಾರುಣ ಸಾವು!

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪ್ರಕಾಶ್ ರಾಜ್ ಹೇಳಿಕೆ ವೈರಲ್!

ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್

ಇತ್ತೀಚಿನ ಸುದ್ದಿ