ಬ್ಲ್ಯಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: 7 ಮಂದಿಗೆ 10 ವರ್ಷ ಜೈಲು - Mahanayaka
1:10 AM Wednesday 11 - December 2024

ಬ್ಲ್ಯಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: 7 ಮಂದಿಗೆ 10 ವರ್ಷ ಜೈಲು

chamarajanagara
01/02/2023

ಚಾಮರಾಜನಗರ: ಬ್ಲಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಸೇರಿದಂತೆ 7 ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ.

ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು.

16 ವರ್ಷದ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದ  ಮೀನಜ್ ಖಾನ್ ಹಾಗೂ ಈತನಿಗೆ ಸಹಕರಿಸಿದ ಈತನ ಅಣ್ಣ ಸೇರಿ ಇತರೆ ಅಪರಾಧಿಗಳ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಚಾಮರಾಜನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿಶಾರಣಿ 10  ವರ್ಷ ಕಠಿಣ ಶಿಕ್ಷೆ ನೀಡಿದ್ದಾರೆ.

ಜೊತೆಗೆ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾದಿಕಾರವು 2 ಲಕ್ಷ ಪರಿಹಾರ ಕೊಡುವಂತೆ ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ