ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ  ಕಿರುಕುಳ | ಆರೋಪಿ ಅರೆಸ್ಟ್ - Mahanayaka
8:25 AM Wednesday 5 - February 2025

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ  ಕಿರುಕುಳ | ಆರೋಪಿ ಅರೆಸ್ಟ್

arrest
04/08/2021

ಕಾರ್ಕಳ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ  ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯ ವಿರುದ್ಧ ಪೋಕ್ಸೋ ಹಾಗೂ ಐ.ಟಿ. ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

24 ವರ್ಷ ವಯಸ್ಸಿನ ಗುಲ್ವಾಡಿಯ ಇಮ್ರಾನ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಂದ ದೂರಿನನ್ವಯ, ಬಾಲಕಿಯ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಾಮಾಜಿಕ ಕಾರ್ಯಕರ್ತ ಯೋಗೀಶ್, ಕಾರ್ಕಳ ನಗರ ಠಾಣಾ ಸಿಬ್ಬಂದಿಗಳಾದ ಶ್ಯಾಮ್ ರವೀಂದ್ರ ಮತ್ತಿತರರು ಭಾಗವಹಿಸಿದ್ದರು. ಇನ್ನೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಆದೇಶದಂತೆ ಬಾಲಕಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ಲಾಬಿ ಮಾಡುತ್ತಿದ್ದರೆ ನಾನೂ ಮಂತ್ರಿಯಾಗುತ್ತಿದ್ದೆ | ಗದ್ಗದಿತರಾದ ಶಾಸಕ ರೇಣುಕಾಚಾರ್ಯ

ಸಿಎಂ ರೇಸ್ ನಲ್ಲಿದ್ದ ಬೆಲ್ಲದ್ ಗೆ ಸಚಿವ ಸ್ಥಾನವೂ ಸಿಗಲಿಲ್ಲ | ಶೆಟ್ಟರ್, ಬಿಎಸ್ ವೈಗೆ ಧಿಕ್ಕಾರ ಹೇಳಿದ ಬೆಂಬಲಿಗರು

ಬ್ರೇಕಿಂಗ್ ನ್ಯೂಸ್: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ | ಯಾರಿಗೆಲ್ಲ ಒಲಿಯಿತು ಸಚಿವ ಸ್ಥಾನ?

ಯೋ ಯೋ ಹನಿ ಸಿಂಗ್ ವಿರುದ್ಧ ಪತ್ನಿಯಿಂದ ದೂರು: ನಟಿಯರೊಂದಿಗೆ ಅಕ್ರಮ ಸಂಬಂಧ, ಮಾದಕ ವ್ಯಸನದ ಆರೋಪ

ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ವಾರ್ಡ್ ಬಾಯ್ ನಿಂದ ಅತ್ಯಾಚಾರ!

ಇತ್ತೀಚಿನ ಸುದ್ದಿ