ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಖ್ಯೋಪಾಧ್ಯಾಯನಿಗೆ ಪೊಲೀಸರ ಎದುರೇ ಹಿಗ್ಗಾಮುಗ್ಗಾ ಥಳಿಸಿದ ಜನರು! - Mahanayaka
5:58 PM Wednesday 11 - December 2024

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಖ್ಯೋಪಾಧ್ಯಾಯನಿಗೆ ಪೊಲೀಸರ ಎದುರೇ ಹಿಗ್ಗಾಮುಗ್ಗಾ ಥಳಿಸಿದ ಜನರು!

patna
19/09/2021

ಪಾಟ್ನಾ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಿಕ್ಷನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದರಿಂದ ಕೋಪಗೊಂಡ ಗ್ರಾಮಸ್ಥರು ಪೊಲೀಸರ ವಶದಲ್ಲಿರುವಾಗಲೇ ಆರೋಪಿಯನ್ನು ಎಳೆದು ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.

ಜಿಲ್ಲೆಯ ಸೇಮಾಪುರ ಪ್ರದೇಶದ ಪಿಪ್ರಿ ಬಹಿಯಾರ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 12 ವರ್ಷ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಕೆನ್ನೆಯನ್ನು ಕಚ್ಚಿ ಗಾಯಗೊಳಿಸಿದ್ದು, ಈ ವೇಳೆ ಬಾಲಕಿಯು ಕೂಗಿದ್ದು, ಬಾಲಕಿಯ ಕೂಗಾಟ ಕೇಳಿ ಕೆಲವರು ಕೋಣೆಗೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಈ ವೇಳೆ ಬಾಲಕಿಯನ್ನು ರಕ್ಷಿಸಿ, ಕೋಣೆಯೊಳಗೆ ಮುಖ್ಯೋಪಾಧ್ಯಾಯ ಕೂಡಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಖ್ಯೋಪಾಧ್ಯಾಯನನ್ನು ಅರೆಸ್ಟ್ ಮಾಡಿದ್ದು, ಆತನನ್ನು ಶಾಲೆಯಿಂದ ಕರೆದುಕೊಂಡು ಹೋಗುತ್ತಿರುವಾಗಲೇ, ಆತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.  ಈ ವೇಳೆ ಪೊಲೀಸರು ಗುಂಪನ್ನು ಚದುರಿಸಿ ಆರೋಪಿಯನ್ನು ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಆರೋಪಿಯು ಅನೇಕ ಬಾರಿ ಇಂತಹ ಕೆಲಸ ಮಾಡಿದ್ದಾನೆ ಎನ್ನಲಾಗಿದೆ. ಸಿಕ್ಕಿಬಿದ್ದಾಗ ಏನಾದರೂ ಕಥೆಗಳನ್ನು ಕಟ್ಟಿ ಬಚಾವ್ ಆಗುತ್ತಿದ್ದ. ಈ ಬಾರಿಯೂ ಹೊಸ ಕಥೆ ಕಟ್ಟಿದ್ದು, ಕೆಲವೊಮ್ಮೆ ನನ್ನ ಮನಸ್ಸು ನಿಯಂತ್ರಣ ಕಳೆದುಕೊಳ್ಳುತ್ತದೆ. ಆಗ ನಾನು ಮಾನಸಿಕ ಅಸ್ವಸ್ಥನಾಗುತ್ತೇನೆ. ಮಾನಸಿಕ ಅಸ್ವಸ್ಥತೆಯಿಂದ ನಾನು ಈ ಕೆಲಸ ಮಾಡಿದ್ದೇನೆ ಎಂದು ಕೇಸ್ ನಿಂದ ಬಚಾವ್ ಆಗಲು ಯತ್ನಿಸಿದ್ದಾನೆ. ಆದರೆ ಈ ಬಾರಿ ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

ಅಮಾನವೀಯ ಘಟನೆ: ಮಕ್ಕಳ ಹೆಸರಿಗೆ ಆಸ್ತಿ ಬರೆದ ಬಳಿಕ ತಂದೆಯನ್ನು ಕೋಣೆಯೊಳಗೆ ಬಂಧಿಸಿಟ್ಟ ಮಕ್ಕಳು!

ಪತಿಯ ಇನ್ನೊಂದು ಮುಖ ಬಯಲಾಗುತ್ತಿದ್ದಂತೆಯೇ ನೇಣಿಗೆ ಶರಣಾದ 4 ತಿಂಗಳ ಗರ್ಭಿಣಿ

ಬೋರ್ ವೇಲ್ ಗೆ ಬಿದ್ದು ಮಗು ಸಾವು ಪ್ರಕರಣಕ್ಕೆ ತಿರುವು: ತಂದೆಯಿಂದಲೇ ನಡೆದಿತ್ತು ಹೀನ ಕೃತ್ಯ

12 ವರ್ಷಗಳ ಬಳಿಕ ಒಂದಾದ ತಾಯಿ ಮಗ | ವಿಶ್ವಾಸದ ಮನೆಯಲ್ಲೊಂದು ಭಾವನಾತ್ಮಕ ಸನ್ನಿವೇಶ

ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ಒಳ್ಳೆಯದಾಗುವುದಿಲ್ಲ | ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ