ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 5 ವರ್ಷ ಶಿಕ್ಷೆ
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಬಿಜೈ ಕಾಪಿಕಾಡು ನಿವಾಸಿ ಶೇಖರ ಯಾನೆ ಜೆ.ಡಿ.ಚಂದ್ರಶೇಖರ್, ಶಿಕ್ಷೆಗೊಳಗಾದ ಆರೋಪಿ. ಈತ 2022ರ ಜೂ.21ರಂದು ಬೆಳಗ್ಗೆ ನಗರದ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರು ನೀಡಲಾಗಿತ್ತು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಎಸ್ಸೈ ಶ್ರೀಕಲಾ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಆರೋಪಿಗೆ ಪೊಕ್ಸೊ ಕಾಯ್ದೆಯ ಕಲಂ8 ರಂತೆ 5 ವರ್ಷ ಸಾದಾ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆಯೂ ಅದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw