ಬಾಲಕಿಯ ಆತ್ಮಹತ್ಯೆಗೆ ದುಷ್ಪ್ರೇರಣೆ: ತಲೆಮರೆಸಿಕೊಂಡಿದ್ದ ಯುವಕನ ಬಂಧನ
ಕಣಿಯೂರು: ಬಾಲಕಿಯ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆಯ ದೂರಿನನ್ವಯ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಶಾಹುಲ್ ಹಮೀದ್ ಅಲಿಯಾಸ್ ಕುಟ್ಟ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಜೀವ ಎಂಬವರ ಅಪ್ರಾಪ್ತ ವಯಸ್ಸಿನ ಪುತ್ರಿ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದಳು. ಬಾಲಕಿಯ ಆತ್ಮಹತ್ಯೆಗೆ ಶಾಹುಲ್ ಹಮೀದ್ ದುಷ್ಪ್ರೇರಣೆಯೇ ಕಾರಣ ಎಂದು ಬಾಲಕಿಯ ತಂದೆ ದೂರು ನೀಡಿದ್ದರು.
ಘಟನೆಯ ಬಳಿಕ ಆರೋಪಿ ಹಮೀದ್ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಉಪಾಧೀಕ್ಷಕ ಶಿವಾಂಶು ರಜಪೂತ್ ನೇತೃತ್ವದ ಎರಡು ತಂಡಗಳನ್ನು ರಚಿಸಿ ಆರೋಪಿಯ ಪತ್ತೆಗೆ ಬಲೆ ಬೀಸಲಾಗಿತ್ತು.
ಇದೀಗ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ಗುರುವಾರ ರಾತ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಯುವತಿಯನ್ನು ಮದುವೆಯಾಗಿದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!
ಭಾವಿ ಪತಿಯನ್ನೇ ಅರೆಸ್ಟ್ ಮಾಡಿದ ಮಹಿಳಾ ಸಬ್ ಇನ್ಸ್ ಪೆಕ್ಟರ್!
ಮದ್ಯ ಪ್ರಿಯರಿಗೆ ಶಾಕ್: ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ
ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ: ಇಬ್ಬರ ದಾರುಣ ಸಾವು
ಪತ್ನಿ ಮಗುವಿಗೆ ಬೆಂಕಿ ಹಚ್ಚಿ ಬಾವಿಗೆ ಹಾರಿದ ಪಾಪಿ ಪತಿ: ಮೂವರ ದುರಂತ ಸಾವು