ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಇಂದು ಆರೋಪಿಗೆ ಶಿಕ್ಷೆ ಪ್ರಕಟ - Mahanayaka

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಇಂದು ಆರೋಪಿಗೆ ಶಿಕ್ಷೆ ಪ್ರಕಟ

hanumantha
06/09/2022

ಉಡುಪಿ: ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ದೋಷಿ ಎಂಬುದಾಗಿ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ.6ರಂದು ಪ್ರಕಟಿಸುವುದಾಗಿ ಆದೇಶ ನೀಡಿದೆ.


Provided by

ಆರೋಪಿಯನ್ನು ಮೂಲತಃ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಾಗೂ ಪ್ರಸ್ತುತ ಕಾಪು ಮಲ್ಲಾರು ನಿವಾಸಿ ಹನುಮಂತ ಬಸಪ್ಪಕಂಬಳಿ(39) ಎಂದು ಗುರುತಿಸಲಾಗಿದೆ. ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷ ಪ್ರಾಯದ ಬಾಲಕಿ 2019ರ ಮಾ.9ರಂದು ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಹನುಮಂತ ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದನು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಆಗಿನ ಮಣಿಪಾಲ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ತನಿಖೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ದೃಶ್ಯಾವಳಿಯಲ್ಲಿನ ಆಧಾರದ ಮೇರೆಗೆ ಆರೋಪಿಯನ್ನು ಮಾ.30ರಂದು ಬಂಧಿಸಲಾಗಿತ್ತು.  ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾದ ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕರೆದುಕೊಂಡು ಹೋಗುವಾಗ ಜೀಪಿನಿಂದ ಹಾರಿ ತಪ್ಪಿಸಿಕೊಂಡು ಓಡಿ ಹೋಗಿದ್ದನು. ಈ ಬಗ್ಗೆ ಆರೋಪಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.


Provided by

ತನಿಖೆ ಪೂರೈಸಿದ ತನಿಖಾಧಿಕಾರಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 59 ಸಾಕ್ಷಿದಾರರ ಪೈಕಿ 29 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್ ಪರವಾಗಿ ವಿಚಾರಣೆಯನ್ನು ಮಾಡಲಾಗಿತ್ತು. ಮುಖ್ಯವಾಗಿ ಸಾಂಧರ್ಭಿಕ ಸಾಕ್ಷ, ಸಿಸಿಟಿವಿ ಫೂಟೇಜ್‌ ಗಳ ಆಧಾರದಲ್ಲಿ ಮತ್ತು ಸ್ಥಳೀಯ ಸಾಕ್ಷಿಗಳ ಆಧಾರದಂತೆ ಮತ್ತು ವೈದ್ಯಾಧಿಕಾರಿಗಳ ಸಾಕ್ಷಗಳನ್ನು ಪರಿಗಣಿಸಿ ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅಭಿಪ್ರಾಯಪಟ್ಟು ಆರೋಪಿಯನ್ನು ದೋಷಿ ಎಂಬುದಾಗಿ ಆದೇಶಿಸಿದರು. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ