ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಒಂದು ವರ್ಷದ ಬಳಿಕ ಆರೋಪಿ ಅರೆಸ್ಟ್ - Mahanayaka

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಒಂದು ವರ್ಷದ ಬಳಿಕ ಆರೋಪಿ ಅರೆಸ್ಟ್

uttar pradesh news
03/10/2021

ಬದೋಹಿ: ಬಾಲಕಿಯೋರ್ವಳನ್ನು ಒಂದು ವರ್ಷದ ಹಿಂದೆ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಒಂದು ವರ್ಷಗಳ ಬಳಿಕ ಪೊಲೀಸರು ಪತ್ತೆ ಮಾಡಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಪ್ರದೇಶದ ಬದೋಹಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪಂಕಜ್ ಕುಮಾರ್ ಎಂಬಾತ ಅಪ್ರಾಪ್ತೆಯೊಂದಿಗೆ ಸಲುಗೆ ಬೆಳೆಸಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದ. ಇದರಿಂದಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಸೆ. 10, 2020ರಂದು ಬಾಲಕಿಯನ್ನು ಆರೋಪಿ ಅಪಹರಿಸಿದ್ದು, ಬಾಲಕಿಯ ತಂದೆ ಸೆ.16ರಂದು ಪ್ರಕರಣ ದಾಖಲಿಸಿದ್ದರು.

ಇನ್ನೂ ನಾಪತ್ತೆಯಾಗಿದ್ದ ಬಾಲಕಿ ಏಳು ತಿಂಗಳ ಮಗುವಿನೊಂದಿಗೆ ಒಬ್ಬಂಟಿಯಾಗಿ  ಐದು ದಿನಗಳ ಹಿಂದೆ ಪಕ್ಕದ ಹಳ್ಳಿಯಲ್ಲಿ ಪತ್ತೆಯಾಗಿದ್ದಳು. ಈ ಮಾಹಿತಿಯ ಮೇರೆಗೆ ಆಕೆಯನ್ನು ಕರೆತಂದು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿದ್ದರು.

ಬಳಿಕ ಸಂತ್ರಸ್ತೆಯಿಂದ ಆರೋಪಿಗೆ ಕರೆ ಮಾಡಿಸಿ ಸೂರ್ಯವಾ ರೈಲ್ವೆ ನಿಲ್ದಾಣಕ್ಕೆ ಕರೆಸಿದ್ದು, ಅಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಸದ್ಯ ಮಹಿಳಾ ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್‌.ಈಶ್ವರಪ್ಪ ಆರೋಪ

ಕ್ರೂಸರ್ ಹಡಗಿನಲ್ಲಿ ರೇವ್ ಪಾರ್ಟಿ: ಎನ್ ಸಿಬಿಯಿಂದ ಶಾರೂಖ್ ಪುತ್ರನ ವಿಚಾರಣೆ

ಅತ್ಯಾಚಾರದ ಆರೋಪ ಹೊರಿಸಿ ಯುವಕನ ಬರ್ಬರ ಹತ್ಯೆ: ಆರೋಪಿಗಳ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಅಂಜನಾದ್ರಿ ಬೆಟ್ಟದಿಂದ ಅಂಗಡಿ ತೆರವು ಮಾಡಲು ಅನ್ಯ ಧರ್ಮೀಯರಿಗೆ ಬೆದರಿಕೆ: ಅತುಲ್ ಕುಮಾರ್ ವಿರುದ್ಧ ಎಫ್ ಐಆರ್

ಮತ್ತೆ ಉದಯಿಸಲಿದೆ ಕೆಜೆಪಿ? | ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಾ?

ಸೊಸೆಗೆ ಚಾಕುವಿನಿಂದ ಚುಚ್ಚಿದ ಅತ್ತೆ: ಸೊಸೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಅತ್ತೆ ನೇಣಿಗೆ ಶರಣು

ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯಿಂದ ಅಂಬೇಡ್ಕರ್ ಅವರ ಜೀವನ ಕುರಿತ ಹಾಡು ಬಿಡುಗಡೆ

ಇತ್ತೀಚಿನ ಸುದ್ದಿ