ಬಾಲಕಿಯ ಮೇಲೆ 29 ಮಂದಿಯಿಂದ ಅತ್ಯಾಚಾರ: 21 ಆರೋಪಿಗಳ ಅರೆಸ್ಟ್
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಗೆ ಬಾಲಕಿ ನೀಡಿರುವ ದೂರಿನನ್ವಯ 21 ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡೊಂಬಿವ್ಲಿಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ 29 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳೆಲ್ಲರೂ ಬಾಲಕಿಯ ಸ್ನೇಹಿತರೇ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಅತ್ಯಾಚಾರಿಗಳ ಪೈಕಿ 21 ಮಂದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೂ ಮೂವರ ಬಂಧನಕ್ಕಾಗಿ ಶೋಧ ಆರಂಭಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376 (ಎನ್ ) 376 (3), 376 (ಡಿ) ಎ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ಶಾಕಿಂಗ್ ನ್ಯೂಸ್: ತಾನು ತೊಟ್ಟಿದ್ದ ಮಾಸ್ಕ್ ಬಿಚ್ಚಿ ಮಾಜಿ ಸಂಸದಗೆ ತೊಡಿಸಿದ ಕೇಂದ್ರ ಸಚಿವ!
ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ!
ಹಾಲು ಬೇಕೆಂದು ಹಠ ಮಾಡುತ್ತಿದ್ದ ಮಗುವನ್ನು ನೆಲಕ್ಕೆ ಬಡಿದು ಹತ್ಯೆ ಮಾಡಿದ ತಾಯಿ!
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಗ್ಯಾಸ್ ಸಿಲಿಂಡರ್ ಸಿಡಿದು ಮೂವರು ಸಾವು
ಮದುವೆ ಮಂಟಪದಲ್ಲಿ ಗುಟ್ಕಾ ಜಗಿದ ವರನಿಗೆ ಕಪಾಳಕ್ಕೆ ಬಾರಿಸಿ ಉಗುಳಿಸಿದ ವಧು! | ವಿಡಿಯೋ ವೈರಲ್
ಅಂಗಡಿಗೆ ನುಗ್ಗಿ 2 ಗೋಣಿ ಸಿಗರೇಟ್. ಗುಟ್ಕಾ ಕಳವು ಮಾಡಿದ ಕಳ್ಳರು!
ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?
“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ