ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ
ಧಾರವಾಡ: ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಶನಿವಾರ ಧಾರವಾಡದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಲಾಯಿತು. ಬೇರೆ ಬೇರೆ ಸ್ಥಳಗಳಲ್ಲಿ ಮೂರು ತಿಂಗಳ ಕಾಲ ಈ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅತ್ಯಾಚಾರಿಗಳು ಸಂತ್ರಸ್ಥೆಗೆ ಪರಿಚಿತರಾಗಿದ್ದು, ಅವರ ವಿವರಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳು ಮತ್ತು ಸಂತ್ರಸ್ತ ಬಾಲಕಿ ಇಬ್ಬರೂ ಅಪ್ರಾಪ್ತರಾಗಿರುವುದರಿಂದ ನಾವು ಪ್ರಕರಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಪ್ರಸ್ತುತ, ಪೊಲೀಸ್ ತಂಡವು ಶಂಕಿತರನ್ನು ತನಿಖೆ ಮತ್ತು ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ
ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಅಸಲಿ ಆರೋಪಿಗಳ ಸುಳಿವು ಪತ್ತೆ
ತುಲುನಾಡ್ ಮನ್ಸ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಕೋಮು ಪ್ರಚೋದನಕಾರಿ ಭಾಷಣ ಆರೋಪ: ಹಾರಿಕಾ ಮಂಜುನಾಥ ವಿರುದ್ಧ ಎಫ್ಐಆರ್ ದಾಖಲು
ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ