ಬಾಲಕಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳು - Mahanayaka
6:04 AM Thursday 12 - December 2024

ಬಾಲಕಿಯ ಮೇಲೆ ದಾಳಿ ನಡೆಸಿದ ಬೀದಿನಾಯಿಗಳು

street dogs
07/06/2021

ದಾವಣಗೆರೆ: ಬೀದಿ ನಾಯಿಗಳು ಬಾಲಕಿಯ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ದಾವಣಗೆರೆ ಜಿಲ್ಲೆಯ ಆಜಾದ್ ನಗರದಲ್ಲಿ ನಡೆದಿದ್ದು,  ಪೋಷಕರು ಹಾಗೂ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

ಆಜಾದ್ ನಗರದ ಸಲಾಂ ಶೇಕ್, ತಬಸ್ಸುಂ ಬಾನು ಅವರ ಪುತ್ರಿ ಖನಿಜಾ ಫಾತಿಮಾ ಮೇಲೆ ನಸುಕಿನ ಜಾವ ಮೂರು ಗಂಟೆಯ ಸುಮಾರಿಗೆ ಬೀದಿ ನಾಯಿಗಳು ದಾಳಿ ನಡೆಸಿವೆ. ಬಾಲಕಿಯ ಚೀರಾಟ ಕೇಳಿ ಪೋಷಕರು ಹಾಗೂ ಸ್ಥಳೀಯರು ಆಗಮಿಸಿದ್ದು, ನಾಯಿಗಳನ್ನು ಓಡಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದಾಳೆ.

ಗಾಯಾಳು ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಚಿಕಿತ್ಸೆಗೆ ಹಣವಿಲ್ಲದೇ ಬಾಲಕಿಯ ಪೋಷಕರು ಪರದಾಟ ನಡೆಸಿದ ಘಟನೆಯೂ ನಡೆದಿದೆ.

ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಸ್ಥಳೀಯ ಆಡಳಿಯ ಸಿಬ್ಬಂದಿ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕೂಡಲೇ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ