ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ! - Mahanayaka
3:20 AM Wednesday 11 - December 2024

ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ!

bulandshahar
12/07/2021

ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳ ಅಟ್ಟಹಾಸ ಮುಂದುವರಿದಿದ್ದು, ಕೆಲವು ದಿನಗಳ ಹಿಂದೆಯಷ್ಟೇ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಳಿಕ ಇದೀಗ ಬಾಲಕಿಯೋರ್ವಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ.

ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು,  ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಳಾಗಿರುವ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತನ್ನ ಮನೆಯ ಮುಂದಿರುವ ಹಸುವಿನ ಸೆಗಣಿಯನ್ನು ತೆಗೆಯುವಂತೆ ಬಾಲಕಿಗೆ ಆರೋಪಿಯು ಧಮ್ಕಿ ಹಾಕಿದ್ದು, ಈ ವಿಚಾರವಾಗಿ ಇವರಿಬ್ಬರ ನಡುವೆ ಜಗಳವಾಗಿದ್ದು, ಜಗಳ ತಾರಕಕ್ಕೇರಿ, ಆರೋಪಿಯು ಬಾಲಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ.

ಪ್ರೇಮ ವೈಫಲದ ಕಾರಣದಿಂದಾಗಿ ಈ ಕೃತ್ಯ ನಡೆದಿದೆ ಎನ್ನುವ ಶಂಕೆ ಕೂಡ ವ್ಯಕ್ತವಾಗಿದ್ದು,  ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ಸಂಪೂರ್ಣ ತನಿಖೆಯ ಬಳಿಕ ಕಾರಣ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು:

ದಂಗಲ್ ಹೀರೋಯಿನ್ ಗಾಗಿ ವಿಚ್ಛೇದನ ಪಡೆದರೇ ಅಮೀರ್ ಖಾನ್? | ಹೀಗೊಂದು ಚರ್ಚೆ!

ಪೋಷಕರೇ ಎಚ್ಚರ!: ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದು ಮಗುವಿನ ಅಪಹರಣ!

ಮಹಿಳೆಯನ್ನು ಕಾಡಿನಲ್ಲಿ ಒತ್ತೆಯಾಳಾಗಿರಿಸಿ 3 ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ

ಮಗಳನ್ನೇ ಅತ್ಯಾಚಾರ ನಡೆಸಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದಾತನಿಗೆ ಅಪಘಾತ!  

ಇತ್ತೀಚಿನ ಸುದ್ದಿ