ಪ್ರೀತಿಸಿಲು ನಿರಾಕರಿಸಿದ ಬಾಲಕಿಯನ್ನು ದಾರಿ ಮಧ್ಯೆ ತಡೆದು ಯುವಕನಿಂದ ಘೋರ ಕೃತ್ಯ! - Mahanayaka
8:45 PM Saturday 10 - January 2026

ಪ್ರೀತಿಸಿಲು ನಿರಾಕರಿಸಿದ ಬಾಲಕಿಯನ್ನು ದಾರಿ ಮಧ್ಯೆ ತಡೆದು ಯುವಕನಿಂದ ಘೋರ ಕೃತ್ಯ!

ameer jamadar
03/08/2021

ಬೆಳಗಾವಿ: ಪ್ರೀತಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಯುವಕನೋರ್ವ 16 ವರ್ಷದ ಬಾಲಕಿಯನ್ನು ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

19 ವರ್ಷ ವಯಸ್ಸಿನ ಅಮೀರ್ ಜಮಾದಾರ್ ಬಂಧಿತ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದ್ದು,  ಬಾಲಕಿಯು ಊರಿಗೆ ಹೋಗಿ ಬಳಿಕ ತನ್ನ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಆರೋಪಿಯು ಈ ಕೃತ್ಯ ನಡೆಸಿರುವುದಾಗಿ ತಿಳಿದು ಬಂದಿದೆ.

ಆರೋಪಿಯು ಬಾಲಕಿಯನ್ನು ಪ್ರೀತಿಸುತ್ತಿದ್ದ ಈ ವಿಚಾರವನ್ನು ಅವಳಿಗೆ ತಿಳಿಸಿದ್ದ ಎಂದು ಹೇಳಲಾಗಿದೆ. ಆದರೆ ಬಾಲಕಿ ಇದನ್ನು ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ಆರೋಪಿಯು ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಾರೂಗೇರಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ಸುದ್ದಿಗಳು…

 

ಒಂದು ದೇಹದಲ್ಲಿ ಎರಡು ಜೀವ | ಸರ್ಕಾರ ಮತ್ತು ಕಾನೂನಿಗೆ ಸವಾಲಾದ ಸಹೋದರರು

200 ರೂಪಾಯಿ ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರಾರಿಯಾದ ಬೈಕ್ ಸವಾರರು!

ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್: ಬೆಂಗಳೂರಿನ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೆ ಎನ್.ಮಹೇಶ್ ಸಿದ್ಧತೆ

ಸದಾನಂದ ಗೌಡ, ರೇಣುಕಾಚಾರ್ಯ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ | ಸಿದ್ದರಾಮಯ್ಯ ಹೇಳಿದ್ದೇನು?

ಲಾಡ್ಜ್ ನಲ್ಲಿ ಬಾಲಕನ ಅತ್ಯಾಚಾರ | ಮದ್ರಸ ಶಿಕ್ಷಕನಿಗೆ 11 ವರ್ಷ ಜೈಲು

ಇತ್ತೀಚಿನ ಸುದ್ದಿ