ಮಂಗಳೂರು: ಬಾಲಕಿಯನ್ನು ಕೊಂದು ಚರಂಡಿಗೆಸೆದ ಪಾಪಿಗಳು! - Mahanayaka
3:10 AM Wednesday 11 - December 2024

ಮಂಗಳೂರು: ಬಾಲಕಿಯನ್ನು ಕೊಂದು ಚರಂಡಿಗೆಸೆದ ಪಾಪಿಗಳು!

mangalore
21/11/2021

ಮಂಗಳೂರು:  ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ.

ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ  ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಬಾಲಕಿಯನ್ನು ಬದುಕಿಸುವ ಕೊನೆಯ ಪ್ರಯತ್ನ ಎಂಬಂತೆ ಎನ್ನುವ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ, ಬಾಲಕಿ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಇನ್ನೂ ಬಾಲಕಿಯನ್ನು ಯಾರು ಹತ್ಯೆ ಮಾಡಿದ್ದಾರೆ ಎನ್ನುವ ಬಗ್ಗೆ ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ನಡೆಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರಿಂದಾಗಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕ್ಷಮೆ ಕೇಳದಿದ್ದರೆ ಪ್ರತಾಪ್ ಸಿಂಹಗೆ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ | ಸ್ವಾಮೀಜಿ ಎಚ್ಚರಿಕೆ

ಬಾಕಿ ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈಯನ್ನೇ ಕತ್ತರಿಸಿದ ಪಾಪಿಗಳು!

ಗ್ರಾಹಕನನ್ನು ತಡೆದು, ‘ಪ್ಯಾಂಟ್ ಧರಿಸಿ ಬನ್ನಿ’ ಎಂದು ವಾಪಾಸ್ ಕಳುಹಿಸಿದ ಬ್ಯಾಂಕ್ ಸಿಬ್ಬಂದಿ!

ಆಡು ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಅಧಿಕಾರಿಯನ್ನು ಕೊಚ್ಚಿ ಹಾಕಿದ ಕಳ್ಳರ ಗ್ಯಾಂಗ್

ಕೋಲಾರ ಎಪಿಎಂಸಿಯಲ್ಲಿ 1 ಕೆ.ಜಿ.ಗೆ 125 ರೂ.ಗೆ ಮಾರಾಟವಾದ ಟೊಮೆಟೋ

ಆಂಧ್ರಪ್ರದೇಶ:  ಪ್ರವಾಹದ ಪರಿಣಾಮ 25 ಮಂದಿ ಸಾವು, 17ಕ್ಕೂ ಅಧಿಕ ಮಂದಿ ನಾಪತ್ತೆ 20 ಸಾವಿರಕ್ಕೂ ಅಧಿಕ ಮಂದಿಯ ಸ್ಥಳಾಂತರ

ಇತ್ತೀಚಿನ ಸುದ್ದಿ