ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ನಾಲ್ಕು ವರ್ಷ ವಯಸ್ಸಿನ ಬಾಲಕನ ದಾರುಣ ಸಾವು!
ಶಿವಮೊಗ್ಗ: ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಳೆಹೊನ್ನೂರು ಸಮೀಪದ ಅರಕೆರೆ ಗ್ರಾಮದ 4 ವರ್ಷ ವಯಸ್ಸಿನ ಧ್ರುವಂತ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಆಗಸ್ಟ್ 29ರಂದು ಮನೆಯ ಸಮೀಪ ಮಗು ಆಟವಾಡುತ್ತಿದ್ದು, ಅಡಿಕೆಗೆ ಹಾಲು ಬೇಯಿಸುವ ಹಂಡೆ ಸಮೀಪ ಕುರ್ಚಿ ಹಾಕಿಕೊಂಡು ಇಣುಕಿ ನೋಡಿದ್ದ ಎನ್ನಲಾಗಿದೆ. ಈ ವೇಳೆ ಆಯ ತಪ್ಪಿ ಹಂಡೆಯೊಳಗೆ ಬಿದ್ದಿದ್ದಾನೆ.
ಹಂಡೆಯೊಳಗೆ ಬಿದ್ದ ಪರಿಣಾಮ ಬಾಲಕನಿಗೆ ತೀವ್ರ ಸುಟ್ಟಗಾಯಗಳಾಗಿತ್ತು. ತಕ್ಷಣವೇ ಬಾಲಕನನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಸುದ್ದಿಗಳು…
ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್
ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ
ಬಿರಿಯಾನಿ ತಿಂದ ಕೆಲವೇ ಹೊತ್ತಿನಲ್ಲಿ ಬಾಲಕಿ ಸಾವು: 15 ದಿನಗಳ ಹಳೆಯ ಕೋಳಿ ಮಾಂಸದಲ್ಲಿ ಬಿರಿಯಾನಿ ತಯಾರಿಕೆ!
ಮುಂಬೈ: ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ!
ಮಮತಾ ಬ್ಯಾನರ್ಜಿಯ ಸಾಧನೆಯನ್ನು ತನ್ನ ಸಾಧನೆ ಎಂದು ಜಾಹೀರಾತು ನೀಡಿದ ಯೋಗಿ ಆದಿತ್ಯನಾಥ್