ಈ ಐದು ಜಿಲ್ಲೆಗಳಲ್ಲಿ ನಾಲ್ಕು ದಿನ ಮದ್ಯ ಮಾರಾಟ ನಿಷೇಧ | ಕಾರಣ ಏನು ಗೊತ್ತಾ?
24/10/2020
ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಿಂದ ಐದು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಕೋಲಾರ ಮಾತ್ರವಲ್ಲದೇ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಲಿದೆ.
ಅ. 28 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಹೊರ ಜಿಲ್ಲೆಯಲ್ಲಿರುವವರ ಮೇಲೆ ನಿಗಾ ಇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ