ಪುನೀತ್ ಅಂತ್ಯಕ್ರಿಯೆ: ಬಾನ ದಾರಿಯಲ್ಲಿ ಜಾರಿ ಹೋದ ಅಪ್ಪು | ಕೋಟ್ಯಾಂತರ ಅಭಿಮಾನಿಗಳ ಕಣ್ಣೀರಿನ ವಿದಾಯ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ಅಭಿಮಾನಿಗಳ, ಪ್ರೀತಿಪಾತ್ರರ ಜಯಘೋಷದೊಂದಿಗೆ ಕರ್ನಾಟಕದ ಪ್ರೀತಿಯ ಅಪ್ಪು ಪ್ರಕೃತಿಯ ಮಡಿಲು ಸೇರಿದ್ದಾರೆ.
ಅಂತ್ಯಕ್ರಿಯೆಗೂ ಮುನ್ನ ಪುನೀತ್ ರಾಜ್ ಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳನ್ನು ನೀಡಲಾಯಿತು. ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನಡೆಸಲಾಗುವುದು. ವಿನಯ್ ರಾಜಕುಮಾರ್ ಅಂತ್ಯಕ್ರಿಯೆ ಮಾಡಲಿದ್ದಾರೆ. ಕಂಠೀರವ ಸ್ಟುಡಿಯೋ ಹೊರಗೆ ಎಲ್ ಇಡಿ ಪರದೆ ಅಳವಡಿಕೆ ಮಾಡಲಾಗಿದ್ದು, ಅಭಿಮಾನಿಗಳು ಅಂತಿಮ ವಿಧಿವಿಧಾನಗಳನ್ನು ಅದರಲ್ಲಿ ವೀಕ್ಷಿಸುತ್ತಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಆರ್.ಅಶೋಕ್ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಸಚಿವ ಗೋಪಾಲಯ್ಯ, ಶಾಸಕ ಎಸ್.ಆರ್.ವಿಶ್ವನಾಥ್, ರಾಕ್ಲೈನ್ ವೆಂಕಟೇಶ್, ನಟ ದುನಿಯಾ ವಿಜಯ್, ರವಿಚಂದ್ರನ್, ಯಶ್, ಸುದೀಪ್, ಉಪೇಂದ್ರ, ಗಣೇಶ್, ನಟಿಯರಾದ ಶ್ರುತಿ, ತಾರಾ, ರಚಿತಾ ರಾಮ್, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕ ತಾರೆಯರು ಭಾಗಿಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb