ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ | ವರದಿ ಕೇಳಿದ ಕೇಂದ್ರ ಗೃಹ ಇಲಾಖೆ
04/05/2021
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಂದ ಬಳಿಕ ಭಾರೀ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿ ಹಲವಾರು ಕಾರ್ಯಕರ್ತರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಇಲಾಖೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.
ಚುನಾವಣಾ ಫಲಿತಾಂಶ ಬಂದ 24 ಗಂಟೆಗಳಲ್ಲಿ, ಅನೇಕ ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಅನೇಕ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಕ್ಷದ ಅನೇಕ ಕಾರ್ಯಕರ್ತರ ಮನೆ ಮತ್ತು ಅಂಗಡಿಗಳು ಧ್ವಂಸವಾಗಿವೆ. ಮಮತಾ ಬ್ಯಾನರ್ಜಿ ಸೋಲು ಮತ್ತು ತೃಣಮೂಲ ಕಾಂಗ್ರೆಸ್ ಗೆಲುವನ್ನು ಹಿಂಸೆ ಮತ್ತು ರಕ್ತದಿಂದ ಆಚರಿಸಲು ಟಿಎಂಸಿ ಪ್ರಾರಂಭಿಸಿದೆ ಎಂದು ಬಿಜೆಪಿ ಆರೋಪಿಸಿದೆ.
ಇನ್ನೂ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರಕ್ಕೆ ಸಂಬಂಧಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ. ಈ ನಡುವೆ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದಿನಿಂದ ಎರಡು ದಿನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.