ಬಾಣಂತಿ ಸಾವು: ಬಳ್ಳಾರಿ ಪ್ರಕರಣ ಮಾಸುವ ಮುನ್ನವೇ ವಿಜಯನಗರದಲ್ಲೂ ಬಾಣಂತಿ ಸಾವು
ವಿಜಯನಗರ: ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಸಿಸೇರಿಯನ್ ಮೂಲಕ ಹೆರಿಗೆಯಾಗಿ ಮೂರು ದಿನಗಳಲ್ಲೇ ಬಾಣಂತಿ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾಗಲಾಪುರ ಗ್ರಾಮದ ಐಶ್ವರ್ಯ(20) ಮೃತಪಟ್ಟ ಬಾಣಂತಿಯಾಗಿದ್ದಾರೆ. ಡಿಸೆಂಬರ್ 20ರಂದು ಐಶ್ವರ್ಯಗೆ ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಈ ಸಂದರ್ಭದಲ್ಲಿ ತಾಯಿ ಮಗುವಿನ ಆರೋಗ್ಯ ಚೆನ್ನಾಗಿತ್ತು. ಆದರೆ ಡಿಸೆಂಬರ್ 23ರಂದು ತಿಂಡಿ ಮಾಡಿದ ತಕ್ಷಣವೇ ಬಾಣಂತಿ ಐಶ್ವರ್ಯಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ತಕ್ಷಣ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಕೊಪ್ಪಳ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಐಶ್ವರ್ಯ ಕೊನೆಯುಸಿರೆಳೆದಿದ್ದಾರೆ.
ವಾಂತಿ-ಭೇದಿ ಹಿನ್ನೆಲೆ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದೆವು, ಕೊಪ್ಪಳ ವೈದ್ಯರು ನೀಡಿದ ವರದಿಗಳ ಪ್ರಕಾರ ಟಿಕ್ಕಿ ಕಾರ್ಡಿಯ ಸೇರಿದೆ. ವಾಂತಿ-ಭೇದಿಯಿಂದ ಮೆಟಾಬೋಲಿಕ್ ಆ್ಯಸಿಡೋಟಸ್ ಆಗಿ ಕಿಡ್ನಿ ವೈಫಲ್ಯದಿಂದ ಸಾವು ಸಂಭವಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ ಎಂದು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ.ಶಂಕರ್ ನಾಯ್ಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: