ಬ್ರೇಕಿಂಗ್ ನ್ಯೂಸ್: ಬಂಧನದ ಭೀತಿಯಲ್ಲಿ ರಮೇಶ್ ಜಾರಕಿಹೊಳಿ
26/03/2021
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಇದೀಗ ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಈ ನಡುವೆ ಕಾಂಗ್ರೆಸ್, ರಮೇಶ್ ಜಾರಕಿಹೊಳಿ ಬಂಧನಕ್ಕೆ ಪಟ್ಟು ಹಿಡಿದಿದೆ. ದೂರು ಬರುವವರೆಗೂ ದೂರು ಬರಲಿ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಿರಿ, ಈಗ ದೂರು ಬಂದಿದೆ ಇನ್ನೂ ಏಕೆ ತಡಮಾಡುತ್ತಿದ್ದೀರಿ? ಯುವತಿಯ ದೂರಿನ ಪ್ರಕಾರ ಕ್ರಮ ಕೈಗೊಂಡು, ಅತ್ಯಾಚಾರದ ಪ್ರಕರಣ ದಾಖಲಿಸಿ, ಆರೋಪಿ ರಮೇಶ್ ಜಾರಕಿಹೊಳಿಯವರನ್ನು ಕೂಡಲೇ ಬಂಧಿಸಿ ಎಂದು ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೆ ನೀಡಿದೆ.
ಅಂತಹ ಸರ್ಕಾರವನ್ನೇ ಬೀಳಿಸಿದ್ದೇನೆ ಇದ್ಯಾವ ಲೆಕ್ಕ” “ನಾಳೆಯಿಂದ ನನ್ನ ಆಟ ಶುರು ಮಾಡುತ್ತೇನೆ” ಇದು ರಮೇಶ್ ಜಾರಕಿಹೊಳಿಯವರ ಇವತ್ತಿನ ಹೇಳಿಕೆಗಳು ಪ್ರಕರಣದ ಮೇಲೆ ಯಾವ ಮಟ್ಟಿನ ಪ್ರಭಾವ ಬೀರಬಲ್ಲರು, ದಿಕ್ಕುತಪ್ಪಿಸಲು ಏನನ್ನೂ ಮಾಡಬಲ್ಲರು ಎನ್ನುವುದಕ್ಕೆ ಈ ಹೇಳಿಕೆಗಳು ಸಾಕ್ಷಿ ಎಂದು ಕಾಂಗ್ರೆಸ್ ಹೇಳಿದೆ.