ಬಂಧಿಸಲು ಹೋದ ಪೊಲೀಸರಿಗೆ ತಲ್ವಾರ್ ತೋರಿಸಿ ಪರಾರಿಯಾದ ರೌಡಿಶೀಟರ್!
ಉಳ್ಳಾಲ: ಪೊಲೀಸ್ ಸಿಬ್ಬಂದಿ ವಾರೆಂಟ್ ಹಿಡಿದುಕೊಂಡು ಆರೋಪಿಯನ್ನು ಹಿಡಿಯಲು ಹೋದಾಗ ರೌಡಿಶೀಟರ್ ತಲ್ವಾರ್ ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ವಿರುದ್ಧ 10ಕ್ಕೂ ಅಧಿಕ ಕೇಸ್ ಗಳಿದ್ದು, ಆತ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ವಾರೆಂಟ್ ನೊಂದಿಗೆ ನಾಲ್ವರು ಪೊಲೀಸರು ತೆರಳಿದ್ದರು ಎನ್ನಲಾಗಿದೆ. ಧರ್ಮನಗರದ ಮನೆಗೆ ತೆರಳಿದಾಗ ತಲ್ವಾರ್ ಹಿಡಿದುಕೊಂಡೇ ಹೊರ ಬಂದ ಆರೋಪಿ ಮುಕ್ತಾರ್ ನಿಜಾಮುದ್ದೀನ್ ಎಂಬಾತನ ಬೈಕ್ ಹತ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ವೇಳೆ ಪೊಲೀಸರು ಆತನನ್ನು ಬೆನ್ನಟ್ಟಿದ್ದಾರೆ. ಈ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಲ್ಲಿ ಆರೋಪಿಗಳಿಗೆ ಪೊಲೀಸರು ಅಡ್ಡಹಾಕಿದ್ದಾರೆ. ಈ ವೇಳೆ ಬೈಕ್ ವ್ಯಾಗನರ್ ಕಾರ್ ಗೆ ಡಿಕ್ಕಿಯಾಗಿ ಬಿದ್ದಿದೆ. ಈ ವೇಳೆ ಆರೋಪಿ ಮುಕ್ತಾರ್ ಸ್ಥಳದಿಂದ ಪರಾರಿಯಾಗಿದ್ದು, ಈತನಿಗೆ ಸಹಾಯ ಮಾಡಿದ ನಿಜಾಮುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಹೋಮ್ ವರ್ಕ್ ಮಾಡಲಿಲ್ಲ ಎಂದು ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ
ಹಿಂದೂ ಧರ್ಮೀಯರ ಮೇಲಿನ ದಾಳಿ ವಿರುದ್ಧ ವಿಎಚ್ ಪಿ, ಬಜರಂಗದಳ ಪ್ರತಿಭಟನೆ
ಅಫ್ಘಾನಿಸ್ತಾನ: ವಾಲಿಬಾಲ್ ಆಟಗಾರ್ತಿಯ ಶಿರಚ್ಚೇದನ ನಡೆಸಿದ ತಾಲಿಬಾನಿಗಳು
ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಪ್ರದರ್ಶಿಸಿದ ಸಂಘ ಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ
ಐವನ್ ಡಿಸೋಜ ಮನೆಗೆ ನುಗ್ಗಲು ಬಜರಂಗದಳದ ಕಾರ್ಯಕರ್ತರಿಂದ ಯತ್ನ: 8 ಮಂದಿ ಅರೆಸ್ಟ್
“ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್” ಎಂಬ ನಳಿನ್ ಹೇಳಿಕೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
ದೇವರ ದರ್ಶನಕ್ಕೆ ಹೋದ ಸ್ವಾಮೀಜಿಯನ್ನು ದರದರನೇ ಎಳೆದೊಯ್ದ ದೇವಸ್ಥಾನದ ಸಿಬ್ಬಂದಿ: ವಿಡಿಯೋ ವೈರಲ್