ನಿರಂತರ ಚಿಕಿತ್ಸೆಯಿಂದ ಆನೆಯನ್ನು ಕಾಪಾಡಿದ ಬಂಡೀಪುರ ಅರಣ್ಯ ಸಿಬ್ಬಂದಿ: ಟ್ವೀಟ್ ಮಾಡಿ ಮೋದಿ ಸಂತಸ
ಚಾಮರಾಜನಗರ: ಬಂಡೀಪುರ ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯದಿಂದಾಗಿ ಆನೆ ಬದುಕುಳಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತ ಪಡಿಸಿದ್ದಾರೆ.
ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅಕ್ರಮ ವಿದ್ಯುತ್ ಪ್ರವಹಿಸಿ ಅಂದಾಜು 25 ವರ್ಷದ ಹೆಣ್ಣಾನೆ ನರಳುತ್ತಿತ್ತು. ಮಾಹಿತಿ ಅರಿತ ಬಂಡೀಪುರ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶು ವೈದ್ಯ ಡಾ.ವಾಸೀಂ ಮಿರ್ಜಾ ಸತತ ನಾಲ್ಕು ತಾಸು ಚಿಕಿತ್ಸೆ ಕೊಟ್ಟು ಚೇತರಿಸಿಕೊಳ್ಳುವಂತೆ ಮಾಡಿದ್ದರು.
ಈ ಘಟನೆಯನ್ನು ಅರಣ್ಯ ಸಚಿವ ಭೂಪೇಂದ್ರ ಯಾದವ್ ಟ್ವೀಟ್ ಮಾಡಿ ಬಂಡೀಪುರ ಅರಣ್ಯ ಇಲಾಖೆ ಕಾರ್ಯವನ್ನು ಶ್ಲಾಘಿಸಿದ್ದರು. ಅರಣ್ಯ ಸಚಿವರ ಟ್ವೀಟ್ ನ್ನು ಇಂದು ಮರು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ” ವಿದ್ಯುತ್ ಶಾಕಿನಿಂದ ಆನೆ ಚೇತರಿಸಿಕೊಂಡು ಬಚಾವ್ ಆಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಅರಣ್ಯ ಇಲಾಖೆ ಕಾರ್ಯವನ್ನು ಪ್ರಶಂಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw