ಬೆಂಗಳೂರು: ತುರ್ತು ಭೂ ಸ್ಪರ್ಶ ಮಾಡಿದ  ಏರ್​ ಇಂಡಿಯಾ ವಿಮಾನ - Mahanayaka

ಬೆಂಗಳೂರು: ತುರ್ತು ಭೂ ಸ್ಪರ್ಶ ಮಾಡಿದ  ಏರ್​ ಇಂಡಿಯಾ ವಿಮಾನ

air india
19/05/2024

ದೇವನಹಳ್ಳಿ: ಏರ್​ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಕಾರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ರಾತ್ರಿ 11:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಕೊಚ್ಚಿಯತ್ತ ಹೊರಟಿದ್ದ ಏರ್​ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು.

ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ವಿಮಾನ ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಲಾಗಿದೆ.


Provided by

ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ