ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ
ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಂದೆ ಊರಿಗೆ ಹೋಗಿದ್ದು, 8 ವರ್ಷದ ಪುತ್ರಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೆಲಸಕ್ಕೆ ತೆರಳಿದ್ದಾರೆ. ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದ ಸಂದರ್ಭದಲ್ಲಿ ಪಕ್ಕದ ಮನೆಯ ಯುವಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ.
ಬಾಲಕಿ ತಾಯಿ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಸ್ಥಳೀಯರ ನೆರವಿನಿಂದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ನಂದಿನಿ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು
ಸಿದ್ದರಾಮಯ್ಯ ಸ್ವಯಂ ಘೋಷಿತ ಸಂವಿಧಾನ ಪಂಡಿತ: ಹೆಚ್.ಡಿ ಕುಮಾರಸ್ವಾಮಿ
ರಸ್ತೆ ಅಪಘಾತಕ್ಕೆ ಕರ್ತವ್ಯ ನಿರತ ಅರಣ್ಯಾಧಿಕಾರಿ ಸಾವು
ಕೊವಿಡ್ ನಿಯಮ: ತನ್ನ ಮದುವೆಯನ್ನೇ ರದ್ಧುಗೊಳಿಸಿದ ನ್ಯೂಜಿಲೆಂಡ್ ಪ್ರಧಾನಿ