ಬೆಂಗಳೂರು ನಗರ ವಿಶ್ವವಿದ್ಯಾಲಯ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು: ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

students protest
21/01/2023

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರಶ್ನಿಸಿದರೆ, ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ನೀವೇಕೆ ಮಾತನಾಡುತ್ತಿದ್ದೀರಿ? ಎಂದು ಹೇಳಿ, ನಿಮ್ಮ ಮೇಲೆ ಲೈಂಗಿಕ ಕಿರುಕುಳದ ಕೇಸ್ ಹಾಕಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀಧರ್, ಮತ್ತು ಕುಲಪತಿಗಳಾದ ಪ್ರೊ.ಲಿಂಗರಾಜು ಗಾಂಧಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ತಾಂಡವ ಗೌಡ ಇವರನ್ನು ತಕ್ಷಣವೇ ವಜಾಗೊಳಿಸುವಂತೆ  ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕುಲಪತಿ ಶ್ರೀಧರ್ ಅವರನ್ನು ಹಲವು ಬಾರಿ ಭೇಟಿ ಮಾಡಿರುವ ವಿದ್ಯಾರ್ಥಿ ಮುಖಂಡರು, ಕಾಲೇಜಿನ ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಸರಿಯಾದ ಗ್ರಂಥಾಲಯ, ಪಠ್ಯಪುಸ್ತಕಗಳು, ಕ್ರೀಡಾ ಸಾಮಗ್ರಿಗಳು ಸಿಗುತ್ತಿಲ್ಲ, ಉತ್ತರ ಪತ್ರಿಕೆಯ ನಕಲು ಪ್ರತಿ ಕೂಡ ಕೊಡುತ್ತಿಲ್ಲ. ಯಾವುದೇ ಕ್ರೀಡಾ ಕೂಟಗಳು ನಡೆದಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸಮರ್ಪಕವಾದ ಶೌಚಾಲಯವಿಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ  ಯಾವ ಸಮಸ್ಯೆಯನ್ನೂ ಬಗೆ ಹರಿಸದೇ, ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಬೆದರಿಸಲು ಮುಂದಾಗಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ವೇಣುಗೋಪಾಲ್ ಮೌರ್ಯ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಲಭ್ಯಗಳನ್ನು ನೀಡಲಾಗಿಲ್ಲ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರಿಯಾದ ಶೌಚಾಲಯದ ವ್ಯವಸ್ಥೆ ಕೂಡ ಮಾಡಿಲ್ಲ. ಕಾಲೇಜಿನ ಶೌಚಾಲಯವನ್ನು ಬಳಸಲು ಸಾಧ್ಯವಾಗದೇ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮೆಟ್ರೋ ರೈಲ್ವೇ ನಿಲ್ದಾಣದ ಶೌಚಾಲಯಕ್ಕೆ ಹೋಗುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದೇವೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಇನ್ನೂ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪೊಲೀಸರು ನೀವು, ಪ್ರತಿಭಟನೆ ಮಾಡುವುದಾದರೆ, ಫ್ರೀಡಂ ಪಾರ್ಕ್ ಗೆ ಹೋಗಿ ಪ್ರತಿಭಟನೆ ಮಾಡಿ ಎಂದು ಎಚ್ಚರಿಕೆ ನೀಡಿದ್ದು, ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ನಾವು ಶೌಚಾಲಯಕ್ಕೆ ಕೂಡ ಫ್ರೀಡಂ ಪಾರ್ಕ್ ಗೆ ಹೋಗಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version