ಬೆಂಗಳೂರಿನ ಪ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ | ಯುವಕ, ಯುವತಿಯ ದಾರುಣ ಸಾವು

bangalore flyover
27/09/2021

ಬೆಂಗಳೂರು: ಪ್ಲೈಓವರ್ ಮೇಲೆ ಅಪಘಾತ ನಡೆದು ಇಬ್ಬರು ಯುವಕ ಯುವತಿ ಸಾವನ್ನಪ್ಪಿರುವ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಫೇಸ್ 1 ಮತ್ತು ಫೇಸ್ 2 ಸಂಪರ್ಕಿಸುವ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದು ಯುವಕ ಹಾಗೂ ಯುವತಿ ಸಾವನ್ನಪ್ಪಿದ್ದಾರೆ.

ಫ್ಲೈಓವರ್ ಮೇಲೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಾವಣಗೆರೆ ಮೂಲದ ಯುವಕ ಯುವತಿ ಬಿಎಂಟಿಸಿ ಬಸ್ ನಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿವಾಜಿನಗರದಿಂದ ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಫೇಸ್ 1 ಮತ್ತು ಫೇಸ್ 2 ಸಂಪರ್ಕಿಸುವ ಫ್ಲೈಓವರ್ ಬಳಿಯಲ್ಲಿ ಯುಟರ್ನ್ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆ ಬೈಕ್ ಗೆ  ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಯುವಕ ಯುವತಿ ಬಸ್ ನಡಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.’

ದಾವಣಗೆರೆ ಮೂಲದ 25 ವರ್ಷ ವಯಸ್ಸಿನ ಪ್ರಭಾಕರ್ ಹಾಗೂ 24 ವರ್ಷ ವಯಸ್ಸಿನ ಸಹನಾ ಅಪಘಾತಕ್ಕೆ ಬಲಿಯಾದವರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನ ಕಂಡು ಗಾಬರಿಯಿಂದ ಸ್ಕೂಟಿಯಿಂದ ಬಿದ್ದ ಮಹಿಳೆ!

ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!

ಭಾರತ್ ಬಂದ್: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಸಾವಿರಾರು ವಾಹನಗಳು

ಶಾಕಿಂಗ್ ನ್ಯೂಸ್: ಏಕಾಏಕಿ ಕುಸಿದು ಬಿದ್ದ ಮೂರು ಅಂತಸ್ತಿನ ಬೃಹತ್ ಕಟ್ಟಡ

ಪುರುಷರ ಒಳ ಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ: ಸೃಷ್ಟಿಯಾಯ್ತು ಹೊಸ ವಿವಾದ

ಇತ್ತೀಚಿನ ಸುದ್ದಿ

Exit mobile version