ಬೆಂಗಳೂರಿನಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಗಂಭೀರ
03/09/2022
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ.
ಬಿಹಾರ ಮೂಲದ ಗೌತಮ್, ಮಂಡಿಲ್, ಮಹಿಳೆ ಸೋನಿ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳು ಇಬ್ಬರೂ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೆ.ಎಸ್. ಲೇಔಟ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka