ಬೆಂಗಳೂರು ಲಾಕ್ ಆಗುವುದು ಪಕ್ಕಾ? | ಉಳಿದ ಜಿಲ್ಲೆಗಳ ಸ್ಥಿತಿ ಏನು?
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಇಂದು ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಲಾಕ್ ಗೆ ಹೆಚ್ಚಿನ ಒಲವು ವ್ಯಕ್ತವಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೊರೊನಾ ಹರಡುವ ಮೊದಲು ಬೆಂಗಳೂರನ್ನು ಲಾಕ್ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಕೆಲವೇ ಕ್ಷಣಗಳಲ್ಲಿ ತಿಳಿದು ಬರಲಿದೆ.
ಬೆಂಗಳೂರಿನಿಂದ ಜನರು ಹಳ್ಳಿಗಳಿಗೆ ವಾಪಸ್ ಆಗುತ್ತಿದ್ದು, ಇದರಿಂದಾಗಿ ಹಳ್ಳಿಗಳಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ಅಥವಾ ಲಾಕ್ ಡೌನ್ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಲಾಕ್ ಡೌನ್ ಸಾಧ್ಯತೆ ಹೆಚ್ಚಿದೆ. ಉಳಿದ ಜಿಲ್ಲೆಗಳಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಲಿದೆ ಎಂದು ಹೇಳಲಾಗಿದೆ. ಇನ್ನೊಂದೆಡೆ, ಲಾಕ್ ಡೌನ್ ಹೆಸರು ಬಳಸದೇ ಕಟ್ಟುನಿಟ್ಟಿನ ಕ್ರಮದ ಹೆಸರಿನಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಗಳಿವೆಯೇ ಎನ್ನುವ ಅನುಮಾನಗಳು ಸೃಷ್ಟಿಯಾಗಿವೆ. ಇನ್ನಷ್ಟು ಮಾಹಿತಿಗಳಿಗಾಗಿ ಮಹಾನಾಯಕ ಮಾಧ್ಯಮವನ್ನು ಗಮನಿ… ಸುದ್ದಿಗಳನ್ನು ಪಡೆಯಲು ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ
https://chat.whatsapp.com/KAkAGO8NuC85Kel32O0tWS