ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸಾವು, 10 ಜನರಿಗೆ ಗಾಯ - Mahanayaka

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸಾವು, 10 ಜನರಿಗೆ ಗಾಯ

21/02/2021

ಹಾಸನ:  ಜಿಲ್ಲೆಯ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟಾಟಾ ಸುಮೋಗೆ ಹಿಂದಿನಿಂದ ಬಂದು ಕ್ವಾಲೀಸ್ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ನಾಲ್ವರು ಮೃತಪಟ್ಟಿದ್ದಾರೆ.

ಗಾಯಾಳುಗಳಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,  ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ