ಮೊದಲ ದಿನವೇ ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ನಲ್ಲಿ ತಾಂತ್ರಿಕ ಸಮಸ್ಯೆ, ವಾಹನ ಸವಾರರ ಆಕ್ರೋಶ
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಇಂದಿನಿಂದ(ಮಾರ್ಚ್ 14) ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಆದ್ರೆ ಟೋಲ್ ವಿರುದ್ಧ ವಾಹನ ಸವಾರರು ಗರಂ ಆಗಿದ್ದಾರೆ. ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ತಗೋತಿರಿ ಅಂತ ಅವಾಜ್ ಹಾಕುತ್ತಿದ್ದಾರೆ.
ಇನ್ನು ಈ ಬಗ್ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿ ಮಾತನಾಡಿದ ವಾಹನ ಸವಾರರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಸಿದ್ಧತೆಯಿಲ್ಲದೇ ಟೋಲ್ ದರ ಸಂಗ್ರಹಿಸಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ, ಟೋಲ್ ಕೂಡ ಸರಿಯಾಗಿ ವರ್ಕ್ ಆಗ್ತಿಲ್ಲ. ಟೋಲ್ ಕಂಬಿ ಕಾರಿನ ಮೇಲೆ ಬೀಳುತ್ತಿದೆ, ಗ್ಲಾಸ್ ಒಡೆದು ಹೋದ್ರೆ ಏನ್ಮಾಡಬೇಕು. ಮೊದಲು ಟೋಲ್ ವ್ಯವಸ್ಥೆ ಸರಿ ಮಾಡಲಿ. ಟೋಲ್ ತಗೋತಾರೆ ಅನ್ನೋದೆ ಗೊತ್ತಿರಲಿಲ್ಲ. ನಿನ್ನೆ ಸಂಜೆಯೇ ಇಲ್ಲಿಂದ ಹೋಗಿದ್ದೀನಿ. ನಿನ್ನೆನೇ ಮಾಹಿತಿ ನೀಡಬೇಕಿತ್ತು. ಕೊನೆ ಪಕ್ಷ ಮುಂದೆ ನೊಟೀಸ್ ಆದ್ರೂ ಹಾಕಬೇಕಿತ್ತು ಎಂದು ಟೋಲ್ ವಿರುದ್ಧ ವಾಹನ ಸವಾರ ಸತೀಶ್ ಆಕ್ರೋಶ ಹೊರ ಹಾಕಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw