ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ರಕ್ತದಾನ ಮಾಡಿದ 75 ಪೊಲೀಸರು
ಬೆಂಗಳೂರು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ನಗರದ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ರಕ್ತದಾನ ಮಾಡಿದ್ದು, ಯುವ ಜನತೆಗೆ ಮಾದರಿಯಾಗಿದ್ದಾರೆ. 75 ಪೊಲೀಸರು ರಕ್ತದಾನ ಮಾಡುವ ಮೂಲಕ ಕ್ಯಾನ್ಸರ್ ಪೀಡಿತ ಮಕ್ಕಳ ಭವಿಷ್ಯಕ್ಕೆ ಬೆಳಕು ಚೆಲ್ಲಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ಅವರ ಉಪ್ಪಾರ ಪೇಟೆಯಲ್ಲಿರುವ ಕಚೇರಿಯಲ್ಲಿ ಲಯನ್ಸ್ ರಕ್ತ ನಿಧಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 75 ಮಂದಿ ಪೊಲೀಸರು ರಕ್ತದಾನ ಮಾಡಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು ಅವರಿಗೆ ರಕ್ತದ ಅವಶ್ಯಕತೆ ಇದ್ದು, ಹೀಗಾಗಿ ಆಸ್ಪತ್ರೆಯವರು ರಕ್ತದಾನ ಮಾಡುವಂತೆ ಕೋರಿದ್ದರು. ಇದಕ್ಕೆ ಪೊಲೀಸರು ಸ್ಪಂದಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ತಮ್ಮ ಕೆಲಸದ ಒತ್ತಡಗಳ ನಡುವೆಯೇ ಸಿಬ್ಬಂದಿ ರಕ್ತದಾನ ಮಾಡಿದ್ದು, ಪೊಲೀಸರು ಕಾರ್ಯಕ್ಕೆ ಕಮಿಷನರ್ ಕಮಲ್ ಪಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ವಿಭಾಗದ ಹಲವು ಠಾಣೆಗಳ ಇನ್ಸ್ ಪೆಕ್ಟರ್, ಪಿಎಸ್ ಐ, ಎಎಸ್ ಐ, ಹೆಡ್ ಕಾನ್ ಸ್ಟೇಬಲ್ ಹಾಗೂ ಕಾನ್ಸ್ ಸ್ಟೇಬಲ್ ಸೇರಿದಂತೆ 75 ಪೊಲೀಸರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ ಎಂದು ಸಂಜೀವ ಪಾಟೀಲ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಬಾಲಕ ಆತ್ಮಹತ್ಯೆಗೆ ಶರಣು
ಬಿಜೆಪಿಗೆ ಬಂದ 17 ಶಾಸಕರಿಗೆ ಬಿಗ್ ಶಾಕ್ ನೀಡಿದ ಮಾಜಿ ಸಿಎಂ ಯಡಿಯೂರಪ್ಪ!
ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಸ್ ನಡಿಗೆ ಎಸೆಯಲ್ಪಟ್ಟ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು!
ನ್ಯಾಯಾಧೀಶರನ್ನು ರಸ್ತೆಯಲ್ಲಿಯೇ ಭೀಕರ ಹತ್ಯೆ: ಸಿಸಿ ಕ್ಯಾಮರದಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ಎರಡು ಮದುವೆಯಾದ ತಂದೆ, ತನ್ನ ಮಗನನ್ನೇ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ!