ಬೆಂಗಳೂರಿನಲ್ಲಿ ಕುಸಿದು ಬಿತ್ತು ಮತ್ತೊಂದು 3 ಅಂತಸ್ತಿನ ಹಳೆಯ ಕಟ್ಟಡ! - Mahanayaka
2:13 AM Wednesday 5 - February 2025

ಬೆಂಗಳೂರಿನಲ್ಲಿ ಕುಸಿದು ಬಿತ್ತು ಮತ್ತೊಂದು 3 ಅಂತಸ್ತಿನ ಹಳೆಯ ಕಟ್ಟಡ!

bangalore
28/09/2021

ಬೆಂಗಳೂರು: ಬೆಂಗಳೂರಿನಲ್ಲಿ ಒಂದೆಡೆ ಭಾರೀ ಅಪಘಾತಗಳು ಸಂಭವಿಸುತ್ತಿದ್ದರೆ, ಇನ್ನೊಂದೆಡೆಯಲ್ಲಿ ಪುರಾತನ ಕಾಲದ ಕಟ್ಟಡಗಳು ಕುಸಿದು ಬೀಳುತ್ತಿದೆ. ನಿನ್ನೆಯಷ್ಟೇ 3 ಅಂತಸ್ತಿನ ಕಟ್ಟಡವೊಂದು ಉರುಳಿ ಬಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು 3 ಅಂತಸ್ತಿನ ಕಟ್ಟಡ ನೆಲಕ್ಕುರುಳಿದೆ.

ರಾಜಧಾನಿ ಬೆಂಗಳೂರಿನ ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರಸ್ ನಲ್ಲಿರುವ 3 ಅಂತಸ್ತಿನ ಕಟ್ಟಡವೊಂದು ಉರುಳಿ ಬಿದ್ದಿದೆ. ಸುಮಾರು 50 ವರ್ಷಕ್ಕೂ ಹಳೆಯ ಕಟ್ಟಡ ಇದಾಗಿದ್ದು, ಕಟ್ಟಡ ಕುಸಿತದಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಈ ಕಟ್ಟಡದಲ್ಲಿ ಯಾರು ವಾಸಿಸುತ್ತಿರಲಿಲ್ಲ ಎಂದು ಹೇಳಲಾಗಿದೆ, ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಬೆಂಗಳೂರಿನಂತಹ ನಗರಗಳಲ್ಲಿ ಕಟ್ಟಡಗಳು ಕುಸಿಯುತ್ತಿರುವುದು ನಾಗಕರಿಕನ್ನು ಆತಂಕಕ್ಕೀಡು ಮಾಡಿದೆ. ಹಳೆಯ ಕಟ್ಟಡಗಳನ್ನು ನಾಶ ಮಾಡದೇ ಹಾಗೆಯೇ ಬಿಟ್ಟು ಬಿಟ್ಟರೆ, ಆ ಕಟ್ಟಡದಲ್ಲಿ ಯಾರೂ ವಾಸಿಸುತ್ತಿರಲಿಲ್ಲವಾದರೂ, ಯಾರಾದರೂ ನಾಗರಿಕರು ಕಟ್ಟಡ ಕುಸಿಯುವ ವೇಳೆ ಅಲ್ಲಿಗೆ ಹೋದರೆ ಅವರ ಪ್ರಾಣಕ್ಕೆ ತೊಂದರೆಯಾದರೆ ಯಾರು ಹೊಣೆ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಈ ಸಂಬಂಧ ಸಂಬಂಧ ಪಟ್ಟ ಅಧಿಕಾರಗಳು ಕೂಡಲೇ ಸೂಕ್ತ ಕಾನೂನು ಜರಗಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್

ಭಾರತೀಯರಿಗೆ ಶಾಕಿಂಗ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ

ಮದುವೆ ದಿನ ಮಂಟಪದಿಂದ ಕಾರಿನಲ್ಲಿ ತೆರಳುವಾಗ ಜೋರಾಗಿ ಅತ್ತ ವರ!

ಸಮನ್ಸ್ ನೀಡಲು ಬಂದ ಪೊಲೀಸ್ ಕಾನ್ ಸ್ಟೇಬಲ್ ನಿಂದ ಬಾಲಕಿಯ ಅತ್ಯಾಚಾರ

ಶಾಕಿಂಗ್ ನ್ಯೂಸ್: ಸೈಬರ್ ಸೆಂಟರ್ ನಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿಯಲ್ಲಿ ಎಸೆದು ಹೋದ ಕಾಮುಕರು

ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂದು ವಿಚ್ಛೇದನ ನೀಡಿದ ಪತಿ

ಇತ್ತೀಚಿನ ಸುದ್ದಿ